HomeKarnataka Newsನಾಗರಹೊಳೆ ಗಡಿಯಲ್ಲಿ ಉರುಳಿಗೆ ಸಿಲುಕಿ ಹುಲಿ ಸಾವು; ತನಿಖೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ನಾಗರಹೊಳೆ ಗಡಿಯಲ್ಲಿ ಉರುಳಿಗೆ ಸಿಲುಕಿ ಹುಲಿ ಸಾವು; ತನಿಖೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ

For Dai;y Updates Join Our whatsapp Group

Spread the love

ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಮೇಟಿಕುಪ್ಪೆ ವನ್ಯಜೀವಿ ವಲಯದಲ್ಲಿ ಮೂರು ವರ್ಷದ ಗಂಡು ಹುಲಿ ಉರುಳಿಗೆ ಸಿಲುಕಿ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.

ಹೆಚ್.ಡಿ. ಕೋಟೆ ತಾಲೂಕಿನ ಅಗಸರಹುಂಡಿ ಶಾಖೆ ವ್ಯಾಪ್ತಿಯ ಕಾಡಂಚಿನ ಜಮೀನಿನಲ್ಲಿ ಅಕ್ರಮವಾಗಿ ಅಳವಡಿಸಿದ್ದ ಉರುಳಿಗೆ ಹುಲಿ ಸಿಲುಕಿ ಮೃತಪಟ್ಟಿದೆ. ಈ ಘಟನೆ ಎರಡು ದಿನಗಳ ಹಿಂದೆಯೇ ನಡೆದಿದ್ದು, ಶುಕ್ರವಾರ ಬೆಳಿಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಹುಲಿ ಯೋಜನೆ ನಿರ್ದೇಶಕಿ ಸೀಮಾ, ಎಸಿಎಫ್ ಮಧು ಹಾಗೂ ಅರಣ್ಯಾಧಿಕಾರಿ ರಶ್ಮಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಪಶುವೈದ್ಯರಾದ ಡಾ. ರಮೇಶ್ ಮತ್ತು ಡಾ. ಪ್ರಸನ್ನ ಮರಣೋತ್ತರ ಪರೀಕ್ಷೆ ನಡೆಸಿ, ಹುಲಿಯ ಅಂತ್ಯಕ್ರಿಯೆಯನ್ನು ಸ್ಥಳದಲ್ಲೇ ನೆರವೇರಿಸಿದರು.

ಈ ಪ್ರಕರಣಕ್ಕೆ ಸಂಬಂಧಿಸಿ, ಜಮೀನು ಮಾಲೀಕರಾದ ಅಗಸರಹುಂಡಿ ಗ್ರಾಮದ ಶಂಕರ್ ಹಾಗೂ ಜಿ.ಎಂ.ಹಳ್ಳಿಯ ಗಿರೀಶ್ ವಿರುದ್ಧ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಘಟನೆಗೆ ಸಂಬಂಧಿಸಿ ಈಶ್ವರ ಬಿ. ಖಂಡ್ರೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದಲ್ಲಿ ತನಿಖೆ ನಡೆಸುವಂತೆ ಸೂಚಿಸಿರುವ ಅವರು, ಗಸ್ತು ಕಾರ್ಯದಲ್ಲಿ ಲೋಪ ಕಂಡುಬಂದರೆ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ.

ಅದೇ ವೇಳೆ, ಉರುಳು ಅಳವಡಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ಕಾಡಂಚಿನ ಜಮೀನುಗಳಲ್ಲಿ ಅಕ್ರಮ ಉರುಳು ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಸಚಿವರು ಸೂಚಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!