HomeKarnataka Newsಈದ್ ಮಿಲಾದ್ʼಗೆ ಟೈಟ್ ಸೆಕ್ಯೂರಿಟಿ: ಕಮಿಷನರ್ ಖಡಕ್ ಸೂಚನೆ..!

ಈದ್ ಮಿಲಾದ್ʼಗೆ ಟೈಟ್ ಸೆಕ್ಯೂರಿಟಿ: ಕಮಿಷನರ್ ಖಡಕ್ ಸೂಚನೆ..!

For Dai;y Updates Join Our whatsapp Group

Spread the love

ಬೆಂಗಳೂರು: ಈದ್ ಮಿಲಾದ್ ಹಬ್ಬದ ಕಾರ್ಯಕ್ರಮ ಅಥವಾ ಮೆರವಣಿಗೆಗಳಿಂದ ಸಾರ್ವಜನಿಕರಿಗೆ, ವಾಹನ ಸಂಚಾರಕ್ಕೆ, ಇತರ ಧರ್ಮದವರ ಭಾವನೆಗಳಿಗೆ ಯಾವುದೇ ರೀತಿಯ ಸಮಸ್ಯೆಗಳಾಗದಂತೆ ಆಯೋಜಕರು ಎಚ್ಚರ ವಹಿಸುವಂತೆ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದಾರೆ.

ಹೌದು ಈದ್‌ ಮಿಲಾದ್ ಹಬ್ಬದ ಪ್ರಯುಕ್ತ ಬೆಂಗಳೂರು ನಗರ ಪೊಲೀಸರು ಕೆಲ ಸೂಚನೆಗಳನ್ನು ಹೊರಡಿಸಿದ್ದಾರೆ.

ವೈ.ಎಂ.ಸಿ.ಎ. ಮೈದಾನ, ಮಿಲ್ಲರ್ ರಸ್ತೆ ಖುದ್ದುಸಾಬ್ ಈದ್ಗಾ ಮೈದಾನ, ಶಿವಾಜಿನಗರ ಛೋಟಾ ಮೈದಾನ, ಭಾರತಿ ನಗರದ ಸುಲ್ತಾನ್‌ಜೀ ಗುಂಟಾ ಮೈದಾನಗಳಲ್ಲಿ ಹಾಗೂ ಇತರೆಡೆಗಳಲ್ಲಿ ಕಾರ್ಯಕ್ರಮಗಳು ನಡೆಯಲಿವೆ.

ಈ ಸಂಬಂಧ ಹಬ್ಬದ ದಿನದಂದು ಕೆಲವು ಸೂಚನೆಗಳನ್ನು ಪಾಲಿಸುವಂತೆ ಬೆಂಗಳೂರು ಪೊಲೀಸ್ ಆದೇಶ ಹೊರಡಿಸಿದೆ.

ಸೂಚನೆಗಳು

  • ಮೆರವಣಿಗೆಯಲ್ಲಿ ಪಾಲ್ಗೊಳ್ಳುವವರು ಯಾವುದೆ ಹರಿತವಾದ ವಸ್ತುಗಳನ್ನು ಹೊಂದಿರಬಾರದು.
  • ಮೆರವಣಿಗೆಯ ಸಮಯದಲ್ಲಿ ಯಾವುದೇ ಕಾರಣಕ್ಕೂ ಡಿಜೆಗಳನ್ನು ಬಳಸಬಾರದು.
  • ಸ್ತಬ್ದ ಚಿತ್ರಗಳು ಯಾವುದೇ ಪ್ರಚೋದನಾತ್ಮಕ ಅಂಶಗಳನ್ನು ಒಳಗೊಂಡಿರಬಾರದು.
  • ಯಾವುದೇ ಪೂಜಾ ಸ್ಥಳಗಳ (ದೇವಸ್ಥಾನ/ಚರ್ಚಗಳ) ಮುಂಭಾಗದಲ್ಲಿ ಘೋಷಣೆಗಳನ್ನು ಕೂಗಬಾರದು.
  • ಮೆರವಣಿಗೆಯ ಸಮಯದಲ್ಲಿ ಆಯೋಜಕರು ವಿದ್ಯುತ್ (ಕೆ.ಇ.ಬಿ) ಇಲಾಖೆಯಿಂದ ಸಿಬ್ಬಂದಿಯವರನ್ನು ನೇಮಿಸಿಕೊಂಡು ಯಾವುದೇ ವಿದ್ಯುತ್ ಸಂಪರ್ಕಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು.
  • ಮೆರವಣಿಗೆಯ ಸಂದರ್ಭದಲ್ಲಿ ಆಯೋಜಕರು ಬೆಂಕಿನಂದಿಸುವ ಸಾಮಗ್ರಿಯನ್ನು ಇಟ್ಟುಕೊಳ್ಳಬೇಕು.
  • ರಾತ್ರಿ ಮೆರವಣಿಗೆ ಮುಗಿದ ನಂತರ ಬೈಕ್‌ನಲ್ಲಿ ಇಬ್ಬರಿಗಿಂತ ಹೆಚ್ಚಾಗಿ ದ್ವಿ-ಚಕ್ರ ವಾಹನವನ್ನು ಚಲಿಸಬಾರದು.
  • ಹಿರಿಯ ನಾಗಕರಿಕರಿಗೆ ಶಾಲಾ ಮಕ್ಕಳಿಗೆ ಹಾಗೂ ಇತರರಿಗೆ ತೊಂದರೆಯಾಗದಂತೆ ಧ್ವನಿವರ್ಧಕಗಳನ್ನು ಬೆಳಿಗ್ಗೆ 06-00 ಗಂಟೆಯಿಂದ ರಾತ್ರಿ 10-00 ಗಂಟೆಯವರೆಗೆ ಮಾತ್ರ ಬಳಸಿಕೊಳ್ಳಬೇಕು.
  • ಧ್ವನಿವರ್ಧಕಗಳನ್ನು ಬಳಸಲು ಸ್ಥಳೀಯ ಪೊಲೀಸರ ಅನುಮತಿ/ಪರವಾನಿಗೆ ಪಡೆದುಕೊಳ್ಳಬೇಕು

ಈ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಧ್ವನಿವರ್ಧಕಗಳಿಂದ ಹೊರಡುವ ಶಬ್ದದ ಪ್ರಮಾಣವನ್ನು ಕಡಿಮೆ ಮಟ್ಟದಲ್ಲಿ ಇಟ್ಟುಕೊಳ್ಳಬೇಕು. ಹಾಗೂ ಯಾವುದೇ ಕಾರಣಕ್ಕೂ ಡಿ.ಜಿ. ಸೌಂಡ್ ಸಿಸ್ಟಂ ಅಳವಡಿಸಲು ಅವಕಾಶ ಇರುವುದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!