ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ತಮ್ಮ ಖಾಸಗಿ ಜೀವನದ ಬಗ್ಗೆ ಸದಾ ಮೌನವಾಗಿದ್ದರೂ, ಇದೀಗ ಅವರ ಮದುವೆ ಸುದ್ದಿ ಭಾರೀ ಸಂಚಲನ ಸೃಷ್ಟಿಸಿದೆ. ಫೆಬ್ರವರಿ 26ರಂದು ಉದಯಪುರ ನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆ ಶಾಸ್ತ್ರಗಳು ನೆರವೇರಲಿವೆ ಎಂದು ಹೇಳಲಾಗುತ್ತಿದೆ.
ಮದುವೆ ಆಹ್ವಾನ ಪತ್ರಿಕೆ ಲೀಕ್ ಆದ ಹಿನ್ನೆಲೆಯಲ್ಲಿ, ಜೋಡಿ ವಿದೇಶಿ ಭದ್ರತಾ ಸಂಸ್ಥೆಯನ್ನು ನೇಮಿಸಿಕೊಂಡಿದೆ. ಮದುವೆ ಸ್ಥಳದಲ್ಲಿ ಮೊಬೈಲ್ ಫೋನ್ ಬಳಕೆ ಸಂಪೂರ್ಣ ನಿಷೇಧಿಸಲಾಗಿದೆ. ಆಯ್ದ ಅತಿಥಿಗಳಿಗೆ ಮಾತ್ರ ಪ್ರವೇಶ, ಸಿಬ್ಬಂದಿಗಳಿಂದ ಎನ್ಡಿಎ ಒಪ್ಪಂದ—ಎಲ್ಲವೂ ಕಟ್ಟು ನಿಟ್ಟಿನ ವ್ಯವಸ್ಥೆಯ ಭಾಗವಾಗಿದೆ.
ಮಾರ್ಚ್ 4ರಂದು ತಾಜ್ ಕೃಷ್ಣ ನಲ್ಲಿ ಅದ್ದೂರಿ ರಿಸೆಪ್ಷನ್ ನಡೆಯಲಿದ್ದು, ತೆಲುಗು ಹಾಗೂ ಬಾಲಿವುಡ್ ಚಿತ್ರರಂಗದ ಗಣ್ಯರು ಸೇರಿದಂತೆ ರಾಜಕೀಯ ಮುಖಂಡರೂ ಭಾಗವಹಿಸುವ ಸಾಧ್ಯತೆ ಇದೆ.
ಗೀತ ಗೋವಿಂದಂ ಮತ್ತು ಡಿಯರ್ ಕಾಮ್ರೇಡ್ ಮೂಲಕ ಪ್ರೇಕ್ಷಕರ ಮನ ಗೆದ್ದ ಈ ಜೋಡಿ, ಈಗ ನಿಜ ಜೀವನದಲ್ಲೂ ಹೊಸ ಅಧ್ಯಾಯ ಆರಂಭಿಸಲು ಸಜ್ಜಾಗಿದೆ.



