• About
  • Advertise
  • Privacy & Policy
  • Contact
Sunday, October 25, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಅರ್ಜಿಗಳ ವಿಲೇವಾರಿ ತೃಪ್ತಿದಾಯಕವಾಗಿರಲಿ : ಗೋವಿಂದರೆಡ್ಡಿ

News Desk by News Desk
November 8, 2024
in Gadag News
0
Timely project progress review meeting
0
SHARES
0
VIEWS
Share on FacebookShare on Twitter

ವಿಜಯಸಾಕ್ಷಿ ಸುದ್ದಿ, ಗದಗ : ಸಕಾಲ ಯೋಜನೆಯ ಅನುಷ್ಠಾನದಲ್ಲಿ ಜಿಲ್ಲೆಯು ರಾಜ್ಯದಲ್ಲಿ ಮೊದಲಿಗಿದ್ದ ಸ್ಥಾನವನ್ನು ಪುನಃ ಪಡೆದು ಉತ್ತಮ ಪ್ರಗತಿ ಸಾಧಿಸಲು ಸ್ವೀಕರಿಸಿದ ಅರ್ಜಿಗಳನ್ನು ನಿಗದಿತ ಸಮಯದಲ್ಲಿಯೇ ವಿಲೇವಾರಿ ಮಾಡಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಸಕಾಲ ಯೋಜನೆಯ ಜಿಲ್ಲಾ ಮಟ್ಟದ ವಿವಿಧ ಇಲಾಖಾಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈ ಮೊದಲು ಗದಗ ಜಿಲ್ಲೆಯು ಸಕಾಲ ಅರ್ಜಿಗಳ ವಿಲೇವಾರಿಯಲ್ಲಿ 6ನೇ ಸ್ಥಾನವನ್ನು ಪಡೆದಿತ್ತು. ಈಗ 13ನೇ ಸ್ಥಾನದಲ್ಲಿರುವುದು ತೃಪ್ತಿಕರವಾಗಿಲ್ಲ. ಮೊದಲಿಗಿದ್ದ ಉತ್ತಮ ಸ್ಥಾನವನ್ನು ಪುನಃ ಪಡೆಯಲು ಅಧಿಕಾರಿಗಳು ಸಕಾಲ ಯೋಜನೆ ಕುರಿತು ಹೆಚ್ಚು ನಿಗಾ ವಹಿಸುವ ಮೂಲಕ ಯೋಜನೆಯನ್ನು ಯಶಸ್ವಿಗೊಳಿಸುವುದರೊಂದಿಗೆ ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆ ಒದಗಿಸಬೇಕು. ಈ ಕುರಿತು ನಿರ್ಲಕ್ಷ್ಯ ಮಾಡಬಾರದು ಎಂದು ಸಲಹೆ ನೀಡಿದರು.

ಪ್ರತಿದಿನ ಅಧಿಕಾರಿಗಳು ಕಚೇರಿಯಲ್ಲಿ ಸಕಾಲ ನಿರ್ವಹಿಸುವ ಕೆಲಸಗಾರರೊಂದಿಗೆ ಚರ್ಚಿಸುವ ಮೂಲಕ ಸಕಾಲ ಅರ್ಜಿಗಳ ವಿಲೇವಾರಿಗೆ ಆದ್ಯತೆ ನೀಡಬೇಕು. ಜಿಲ್ಲೆಯು ಸಕಾಲ ಯೋಜನೆಯಡಿ ಉತ್ತಮ ಪ್ರಗತಿಯಲ್ಲಿರುವಂತೆ ನೋಡಿಕೊಳ್ಳುವುದು ಪ್ರತಿಯೊಬ್ಬ ಅಧಿಕಾರಿಗಳ ಜವಾಬ್ದಾರಿ ಎಂದರಿತು ಕರ್ತವ್ಯ ನಿರ್ವಹಿಸಬೇಕೆಂದು ಸೂಚಿಸಿದರು.

ಸಕಾಲ ನೋಡಲ್ ಅಧಿಕಾರಿಗಳು ಮಾತನಾಡಿ, ಅಕ್ಟೊಬರ್ ೨೦೨೪ರ ಮಾಹೆಯಲ್ಲಿ ಜಿಲ್ಲೆಯಲ್ಲಿ ಸಕಾಲ ಯೋಜನೆಯಡಿ 55158 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. 4175 ಅರ್ಜಿಗಳು ತಿರಸ್ಕೃತಗೊಂಡಿದ್ದು, 1494 ಅರ್ಜಿಗಳನ್ನು ನಿಗದಿತ ಅವಧಿ ಮೀರಿದ ನಂತರ ವಿಲೇವಾರಿ ಮಾಡಲಾಗಿದೆ ಎಂದು ಸಕಾಲಕ್ಕೆ ಸಂಬಂಧಿಸಿದಂತೆ ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ. ಸಂಕದ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ಶಶಿಕಾಂತ ಕೋಟಿಮನಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶರಣು ಗೋಗೆರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಅಮಿತ ಬಿದರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಸಕಾಲ ಯೋಜನೆಯಡಿ ಸ್ವೀಕರಿಸಿದ ಅರ್ಜಿಗಳನ್ನು ವಿನಾಕಾರಣ ತಿರಸ್ಕಾರ ಮಾಡಬಾರದು ಹಾಗೂ ಸ್ವೀಕರಿಸಿದ ಅರ್ಜಿಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು. ಸಕಾಲದಲ್ಲಿ ಅರ್ಜಿಗಳ ವಿಲೇವಾರಿ ಸಮರ್ಪಕ ಕೆಲಸ ನಿರ್ವಹಣೆಯಾಗದಿದ್ದರೆ ಸಂಬಂಧಿಸಿದ ಅಧಿಕಾರಿಗಳಿಗೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಸಕಾಲ ಯೋಜನೆಯ ಯಶಸ್ವಿಗಾಗಿ ಅಧಿಕಾರಿಗಳು ಜವಾಬ್ದಾರಿಯಿಂದ ಕರ್ತವ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದರು.

Tags: District Collector GovindarreddyGadaggadaganewsLatestNewsTimely project progress review meetingupdatenews
Previous Post

ವಿಷ್ಣುಸಾ ಅರವಟಗಿಯವರಿಂದ ವಿಶಿಷ್ಠ ಜನ್ಮದಿನಾಚರಣೆ

Next Post

ಫಲಾನುಭವಿಗಳ ಆಯ್ಕೆ ಪಾರದರ್ಶಕವಾಗಿರಲಿ : ಗೋವಿಂದರೆಡ್ಡಿ

News Desk

News Desk

Next Post
SCP/ TSP Progress Review Meeting

ಫಲಾನುಭವಿಗಳ ಆಯ್ಕೆ ಪಾರದರ್ಶಕವಾಗಿರಲಿ : ಗೋವಿಂದರೆಡ್ಡಿ

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಶೃಂಗೇರಿ ಬಳಿ ರಸ್ತೆ ಮಧ್ಯೆಯೇ ಹೊತ್ತಿ ಉರಿದ ಡಸ್ಟರ್ ಕಾರು: ದಂಪತಿ, ಪುತ್ರ ಪಾರು!

ಶೃಂಗೇರಿ ಬಳಿ ರಸ್ತೆ ಮಧ್ಯೆಯೇ ಹೊತ್ತಿ ಉರಿದ ಡಸ್ಟರ್ ಕಾರು: ದಂಪತಿ, ಪುತ್ರ ಪಾರು!

October 25, 2026
ಮೊಬೈಲ್ ಬಳಕೆ, ತಪ್ಪಾದ ಕುಳಿತುಕೊಳ್ಳುವ ಭಂಗಿಯಿಂದ ಬೆನ್ನುನೋವು: ಬೆನ್ನುಮೂಳೆಯ ಆರೋಗ್ಯಕ್ಕೆ ಈ ಸಲಹೆ ಪಾಲಿಸಿ!

ಮೊಬೈಲ್ ಬಳಕೆ, ತಪ್ಪಾದ ಕುಳಿತುಕೊಳ್ಳುವ ಭಂಗಿಯಿಂದ ಬೆನ್ನುನೋವು: ಬೆನ್ನುಮೂಳೆಯ ಆರೋಗ್ಯಕ್ಕೆ ಈ ಸಲಹೆ ಪಾಲಿಸಿ!

October 25, 2026
ಕಬ್ಬು ಬೆಳೆಗಾರರ ವಿಚಾರದಲ್ಲಿ ಸಿಎಂ ನಾಟಕ: ಡಿ.ಕೆ. ಶಿವಕುಮಾರ್ ವಿರುದ್ಧ ವಿಜಯೇಂದ್ರ ವಾಗ್ದಾಳಿ!

ಕಬ್ಬು ಬೆಳೆಗಾರರ ವಿಚಾರದಲ್ಲಿ ಸಿಎಂ ನಾಟಕ: ಡಿ.ಕೆ. ಶಿವಕುಮಾರ್ ವಿರುದ್ಧ ವಿಜಯೇಂದ್ರ ವಾಗ್ದಾಳಿ!

October 25, 2026
ಒಬ್ಬ ಸಿಎಂ ಜನಸ್ಪಂದನೆ ಮಾಡುವುದನ್ನು ನಾನು ಅಭಿನಂದಿಸುತ್ತೇನೆ: ಹೆಚ್ ಡಿ ಕುಮಾರಸ್ವಾಮಿ

‘ದೇವೇಗೌಡರ ಕುಟುಂಬ ಮುಗಿಸಲು 600 ಕೋಟಿ ಡೀಲ್!’: ಸ್ಟಿಂಗ್ ಪ್ರಕರಣದಲ್ಲಿ ಕುಮಾರಸ್ವಾಮಿ ಗಂಭೀರ ಆರೋಪ

October 25, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಶೃಂಗೇರಿ ಬಳಿ ರಸ್ತೆ ಮಧ್ಯೆಯೇ ಹೊತ್ತಿ ಉರಿದ ಡಸ್ಟರ್ ಕಾರು: ದಂಪತಿ, ಪುತ್ರ ಪಾರು!

ಶೃಂಗೇರಿ ಬಳಿ ರಸ್ತೆ ಮಧ್ಯೆಯೇ ಹೊತ್ತಿ ಉರಿದ ಡಸ್ಟರ್ ಕಾರು: ದಂಪತಿ, ಪುತ್ರ ಪಾರು!

October 25, 2026
ಮೊಬೈಲ್ ಬಳಕೆ, ತಪ್ಪಾದ ಕುಳಿತುಕೊಳ್ಳುವ ಭಂಗಿಯಿಂದ ಬೆನ್ನುನೋವು: ಬೆನ್ನುಮೂಳೆಯ ಆರೋಗ್ಯಕ್ಕೆ ಈ ಸಲಹೆ ಪಾಲಿಸಿ!

ಮೊಬೈಲ್ ಬಳಕೆ, ತಪ್ಪಾದ ಕುಳಿತುಕೊಳ್ಳುವ ಭಂಗಿಯಿಂದ ಬೆನ್ನುನೋವು: ಬೆನ್ನುಮೂಳೆಯ ಆರೋಗ್ಯಕ್ಕೆ ಈ ಸಲಹೆ ಪಾಲಿಸಿ!

October 25, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper
f 𝕏 WhatsApp Copy Link