ನೆಲ್ಲೂರು:– ಟಿಪ್ಪರ್ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮದಿಂದ ಮಗು ಸೇರಿದಂತೆ 7 ಜನರು ಸಾವನ್ನಪ್ಪಿರುವ ಘಟನೆ ನೆಲ್ಲೂರಿನ ಸಂಗಮ್ ಮಂಡಲದ ರಾಷ್ಟ್ರೀಯ ಹೆದ್ದಾರಿಯಲ್ಲಿ ಜರುಗಿದೆ.
Advertisement
ರಸ್ತೆಯಲ್ಲಿ ಅತಿ ವೇಗವಾಗಿ ಬರುತ್ತಿದ್ದ ಟಿಪ್ಪರ್ ಕಾರಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮದಿಂದ ವಾಹನವು ಲಾರಿಯ ಕೆಳಗೆ ನಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದವರು ಮೃತಪಟ್ಟಿದ್ದಾರೆ. ಈ ಅಪಘಾತದ ಸಮಯದಲ್ಲಿ ಕಾರು ನೆಲ್ಲೂರಿನಿಂದ ಕಡಪದ ಕಡೆಗೆ ಸಾಗುತ್ತಿತ್ತು. ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಈ ದುರಂತ ಅಪಘಾತದ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೇ ಮೃತರ ಕುಟುಂಬಗಳಿಗೆ ಸಂಪೂರ್ಣ ನೆರವು ನೀಡುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ತಿಳಿದಬಂದಿದೆ.