ನವದೆಹಲಿ: ತಿಪಟೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ. ಷಡಕ್ಷರಿ ಅವರು ದೆಹಲಿಯಲ್ಲಿ ಅಸ್ವಸ್ಥಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಶಾಸಕ ಷಡಕ್ಷರಿ ಅವರು ದೆಹಲಿಯ ಕರ್ನಾಟಕ ಭವನದಲ್ಲಿದ್ದ ವೇಳೆ ದಿಢೀರ್ ಆರೋಗ್ಯ ಸಮಸ್ಯೆ ಎದುರಿಸಿದ್ದಾರೆ. ಈ ಸಂದರ್ಭ ಅಲ್ಲಿಯೇ ಇದ್ದ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಅವರು ತಕ್ಷಣ ನೆರವಿಗೆ ಧಾವಿಸಿ, ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಪ್ರಸ್ತುತ ಷಡಕ್ಷರಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರು ಅವರ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ ಎಂದು ತಿಳಿದುಬಂದಿದೆ.
ಶಾಸಕ ಷಡಕ್ಷರಿ ಅವರು ಸಚಿವ ಸಂಪುಟ ವಿಸ್ತರಣೆ ಹಾಗೂ ಸಚಿವ ಸ್ಥಾನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗುವ ಉದ್ದೇಶದಿಂದ ದೆಹಲಿಗೆ ತೆರಳಿದ್ದರು. ಈ ವೇಳೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.



