ಬೆಂಗಳೂರು:- ರಾಜಧಾನಿ ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಪತಿ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬಳು ಲೈವ್ ವಿಡಿಯೊ ಮಾಡಿಟ್ಟುಕೊಂಡು ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ.
25 ವರ್ಷದ ಮಾನಸ ಮೃತ ಮಹಿಳೆ. ಮಾನಸ 6 ವರ್ಷದ ಹಿಂದೆ ದಿಲೀಪ್ ಎಂಬುವನ ಜತೆ ವಿವಾಹವಾಗಿದ್ದರು. ದಂಪತಿಗೆ 5 ವರ್ಷದ ಒಂದು ಹೆಣ್ಣು ಮಗು ಇದೆ. ಆದರೆ, ದಿಲೀಪ್ ಒಂದೂವರೆ ವರ್ಷದಿಂದ ಬೇರೊಂದು ಮಹಿಳೆ ಸಹವಾಸ ಮಾಡುತ್ತಿದ್ದ ಎನ್ನಲಾಗಿದೆ. ಇದೇ ವಿಚಾರಕ್ಕೆ ಪತಿ ಪತ್ನಿ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಬೇಸತ್ತ ಮಾನಸ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಾನಸ ಅಂದ್ರಹಳ್ಳಿ ಗಂಡನ ಮನೆಯಲ್ಲಿ ವಾಸವಿದ್ದರು. ಭಾನುವಾರ ಸಂಜೆ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ಬಳಿಕ ದಿಲೀಪ್ ಮನೆಯವರ ವಿರುದ್ಧ ಮಾನಸ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪತಿ ಕಿರುಕುಳದಿಂದ ಆತ್ಮಹತ್ಯೆ ಎಂದು ಆರೋಪಿಸಿದ್ದಾರೆ.