ತಿರುಪತಿ ಲಡ್ಡು ವಿವಾದ: ನಂದಿನಿ ಉತ್ಪನ್ನಗಳಿಗೆ ಡಿಮ್ಯಾಂಡಪ್ಪೋ, ಡಿಮ್ಯಾಂಡ್!

0
Spread the love

ಬಳ್ಳಾರಿ:- ತಿರುಪತಿ ಲಡ್ಡು ವಿವಾದದ ಬಳಿಕ ನಂದಿನಿ ಹಾಲು ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಾಗಿದೆ.

Advertisement

ತಿರುಪತಿ ಲಡ್ಡು ವಿವಾದದ ಬೆನ್ನಲ್ಲೇ ಕರ್ನಾಟಕದ ಎಲ್ಲ ಮುಜರಾಯಿ ದೇಗುಲಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಜತೆಗೆ, ಎಲ್ಲ ದೇಗುಲಗಳ ಪ್ರಸಾದವನ್ನು ಪ್ರಯೋಗಾಲಯಗಳಲ್ಲಿ ಪರೀಕ್ಷೆಗೆ ಒಳಪಡಿಸಲೂ ಸೂಚನೆ ನೀಡಿತ್ತು. ಇದರಿಂದಾಗಿ ನಂದಿನಿ ಹಾಲು ಮತ್ತು ಹಾಲಿನ‌ ಉತ್ಪನ್ನಗಳ ಬೇಡಿಕೆ ಹೆಚ್ಚಳವಾಗಿದೆ.

ಮತ್ತೊಂದೆಡೆ, ಕಲಬೆರಕೆ ತುಪ್ಪ ಮತ್ತು ಹಾಲಿನ ಉತ್ಪನ್ನಗಳ ಆತಂಕದಿಂದಾಗಿ ಜನರಲ್ಲಿಯೂ ನಂದಿನಿ ಹಾಲು ಮತ್ತು ನಂದಿನಿ ಉತ್ಪನ್ನಗಳ ಮೇಲೆ ಒಲವು ಹೆಚ್ಚಾಗಿದೆ ಎಂದು ತಿಳಿದು ಬಂದಿದೆ.

ಇದೀಗ ನಂದಿನಿ ಏಜೆನ್ಸಿಗಳನ್ನು ತೆರೆಯಲು ಅರ್ಜಿ ಸಲ್ಲಿಸುವರರ ಸಂಖ್ಯೆಯೂ ಹೆಚ್ಚಾಗಿದೆ ಎಂದು ಬಳ್ಳಾರಿ ರಾಬಕೋವಿ ಹಾಲು ಒಕ್ಕೂಟದ ಎಂಡಿ ಪೀರ‍್ಯಾ ನಾಯ್ಕ್ ತಿಳಿಸಿದ್ದಾರೆ. ಬೇಡಿಕೆ ಎಷ್ಟು ಹೆಚ್ಚಾದರೂ ಪೂರೈಕೆ ಮಾಡಲು ನಾವು ಸಿದ್ಧರಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಬಳ್ಳಾರಿ ಹಾಲು ಒಕ್ಕೂಟದ ವ್ಯಾಪ್ತಿಯಲ್ಲಿ ಪ್ರತಿ ದಿನ 2.20 ಲಕ್ಷ ಲೀಟರ್ ಹಾಲು ಖರೀದಿ ಮಾಡಲಾಗುತ್ತಿದೆ. ಪ್ರತಿ ದಿನಕ್ಕೆ 1.50 ಲಕ್ಷ ಲೀಟರ್ ಹಾಲು ಮಾರಾಟ ಮಾಡುತ್ತಿದ್ದೇವೆ. ಪ್ರತಿ ದಿನ 10 ಸಾವಿರ ಲೀಟರ್ ಮೊಸರು ಮಾರಾಟ ಮಾಡಲಾಗುತ್ತಿದೆ. ಪ್ರತಿ ದಿನ 500 ಕೆಜಿ ತುಪ್ಪ ಮಾರಾಟ ಮಾಡಲಾಗುತ್ತಿದೆ ಎಂದು ಪೀರ‍್ಯಾ ನಾಯ್ಕ್ ಮಾಹಿತಿ ನೀಡಿದ್ದಾರೆ.


Spread the love

LEAVE A REPLY

Please enter your comment!
Please enter your name here