ತಿರುಪತಿ ಲಡ್ಡು ವಿವಾದ: ವಿವಿಧ ಕಂಪನಿಯ ತುಪ್ಪಗಳನ್ನು ಪರೀಕ್ಷೆ ನಡೆಸುವಂತೆ ದಿನೇಶ್ ಗುಂಡೂರಾವ್ ಆದೇಶ

0
Spread the love

ಬೆಂಗಳೂರು: ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದ ತಯಾರಿಕೆಗೆ ಈ ಹಿಂದೆ ಬಳಸಲಾಗುತ್ತಿದ್ದ ತುಪ್ಪದ ಬಗ್ಗೆ ದೇಶದಲ್ಲಿ ಸಾಕಷ್ಟು ಚರ್ಚೆ ಆರಂಭವಾದ ಬೆನ್ನಲ್ಲೇ ಕರ್ನಾಟಕ ಸರ್ಕಾರ ರಾಜ್ಯದಲ್ಲಿ ತಯಾರಾಗುವ ವಿವಿಧ ಕಂಪನಿಗಳ ತುಪ್ಪವನ್ನು ಪರೀಕ್ಷಿಸಲು ನಿರ್ಧರಿಸಿದೆ. ಹೌದು ಇಲ್ಲಿ ತಯಾರಾಗುವ ಮತ್ತು ಮಾರಾಟ ಮಾಡುತ್ತಿರುವ ವಿವಿಧ ಕಂಪನಿಯ ತುಪ್ಪಗಳನ್ನು ಪರೀಕ್ಷೆ ನಡೆಸುವಂತೆ,

Advertisement

ಸಚಿವ ದಿನೇಶ್ ಗುಂಡೂರಾವ್ ರಾಜ್ಯ ಆಹಾರ ಸುರಕ್ಷಿತ ಹಾಗೂ ಗುಣಮಟ್ಟ ಇಲಾಖೆಗೆ ಆದೇಶಿಸಿದ್ದಾರೆ. ತ್ವರಿತಗತಿಯಲ್ಲಿ ವಿವಿಧ ಕಂಪನಿಗಳ ತುಪ್ಪದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಿ. ವರದಿ ಬಂದ ಬಳಿಕ ಇವುಗಳಲ್ಲಿ ಕಲಬೆರಕೆ ಕಂಡು ಬಂದಲ್ಲಿ, ಕೂಡಲೇ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದ್ದಾರೆ.ಜೊತೆಗೆ ರಾಜ್ಯದ ದೇವಸ್ಥಾನಗಳಲ್ಲಿ ತುಪ್ಪದಿಂದ ತಯಾರಾಗುವ ಪ್ರಸಾದಗಳ ಮಾದರಿಯನ್ನೂ ಆಹಾರ ಇಲಾಖೆ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲು ತಯಾರಿ ನಡೆಸಿದೆ.

 


Spread the love

LEAVE A REPLY

Please enter your comment!
Please enter your name here