ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಎಸ್‌ಸಿ/ಎಸ್‌ಟಿ ಸಮುದಾಯದ ಏಳಿಗೆಗಾಗಿ ಹಲವಾರು ಯೋಜನೆಗಳು ಜಾರಿಯಲ್ಲಿದ್ದು, ಇವೆಲ್ಲವುಗಳನ್ನು ಅರ್ಹ ಫಲಾನುಭವಿಗಳು ಸದುಪಯೋಗಪಡಿಸಿಕೊಂಡು ಆರ್ಥಿಕ ಸ್ವಾವಲಂಬಿಗಳಾಗಬೇಕೆAದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಅವರು ಮಂಗಳವಾರ ಶಿರಹಟ್ಟಿ ಪಟ್ಟಣದ ಎಫ್.ಎಂ. ಡಬಾಲಿ ಕಾಲೇಜು ಆವರಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ ಅಭಿವೃದ್ಧಿ ನಿಗಮ, ಆದಿ ಜಾಂಬವ ಅಭಿವೃದ್ಧಿ ನಿಗಮ, ಭೋವಿ ಅಭಿವೃದ್ಧಿ ನಿಗಮದ ವತಿಯಿಂದ ಗಂಗಾ ಕಲ್ಯಾಣ ಯೋಜನೆಯಡಿ ೧೯ ಫಲಾನುಭವಿಗಳಿಗೆ ಪಂಪ್‌ಸೆಟ್ ಹಾಗೂ ಪೈಪ್‌ಗಳನ್ನು ವಿತರಿಸಿ ಮಾತನಾಡಿದರು.
ಈ ಯೋಜನೆಯಡಿ ಈಗಾಗಲೇ ಫಲಾನುಭವಿಗಳ ಜಮೀನುಗಳಲ್ಲಿ ಬೋರ್‌ವೆಲ್ ಕೊರೆಯಿಸಲಾಗಿದ್ದು, ಇದಕ್ಕೆ ಅಳವಡಿಸಬೇಕಾದ ಪಂಪ್‌ಸೆಟ್ ಮತ್ತು ಪೈಪುಗಳನ್ನು ಸಮರ್ಪಕವಾಗಿ ಜೋಡಣೆ ಮಾಡಿಕೊಳ್ಳಬೇಕು. ಈ ಹಿಂದೆ ನಿಗಮದ ಅಧಿಕಾರಿಗಳೊಂದಿಗೆ ಕ್ಷೇತ್ರದಲ್ಲಿಯ ಅರ್ಹ ಫಲಾನುಭವಿಗಳಿಗೆ ಪಂಪ್‌ಸೆಟ್ ಮತ್ತು ಪೈಪುಗಳನ್ನು ವಿತರಿಸುವಂತೆ ಮನವಿ ಮಾಡಿಕೊಳ್ಳಲಾಗಿತ್ತು. ಅದರಂತೆ ಹಂತ ಹಂತವಾಗಿ ಫಲಾನುಭವಿಗಳಿಗೆ ಪರಿಕರಗಳನ್ನು ವಿತರಿಸಲಾಗುತ್ತಿದೆ. ಇದನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು. ಇಲ್ಲದೇ ಹೋದಲ್ಲಿ ನಿಯಮಾನುಸಾರ ಮುಂದಿನ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.
ತಾ.ಪಂ ಮಾಜಿ ಅಧ್ಯಕ್ಷ ಜಾನು ಲಮಾಣಿ, ಪ.ಪಂ ಸದಸ್ಯರಾದ ಫಕ್ಕೀರೇಶ ರಟ್ಟಿಹಳ್ಳಿ, ಸಂದೀಪ ಕಪ್ಪತ್ತನವರ, ಅಶೋಕ ವರವಿ, ಪರಶುರಾಮ ಡೊಂಕಬಳ್ಳಿ, ಗೂಳಪ್ಪ ಕರಿಗಾರ, ಎಚ್.ಎಂ. ದೇವಗಿರಿ, ಸಿ.ಪಿ. ಕಾಳಗಿ, ಅಕ್ಬರಸಾಬ ಯಾದಗಿರಿ, ಶರಣು ಹೊಸೂರ, ಮಲ್ಲಿಕಾರ್ಜುನ ಕಬಾಡಿ, ನಿಗಮದ ಅಧಿಕಾರಿ ಉದಯಕುಮಾರ ಮುಂತಾದವರು ಉಪಸ್ಥಿತರಿದ್ದರು.
ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಚಳಿಗಾಲ ಅಧಿವೇಶನದಲ್ಲಿ, ಲಕ್ಷೆö್ಮÃಶ್ವರ ತಾಲೂಕು ಘೋಷಣೆಯಾಗಿ ಹಲವು ವರ್ಷಗಳು ಗತಿಸಿದರೂ ಸಹ ಇಲ್ಲಿಯವರೆಗೂ ಆಡಳಿತ ಕೇಂದ್ರ (ಪ್ರಜಾಸೌಧ) ನಿರ್ಮಾಣವಾಗದೇ ಇರುವ ಬಗ್ಗೆ ಸದನದಲ್ಲಿ ವಿಷಯ ಪ್ರಸ್ತಾಪಿಸಿದ್ದೆ. ಆ ಪ್ರಯುಕ್ತ ಡಿ.೨೧ರಂದು ಸರಕಾರ ರಾಜ್ಯದಲ್ಲಿ ಹೊಸದಾಗಿ ರಚನೆಯಾದ ತಾಲೂಕುಗಳಲ್ಲಿ ಪ್ರಜಾಸೌಧ ತಾಲೂಕು ಆಡಳಿತ ಕೇಂದ್ರದ ಕಟ್ಟಡ ನಿರ್ಮಿಸುವದಕ್ಕೆ ಅನುಮೋದನೆ ನೀಡಿದ್ದು, ಅದರಲ್ಲಿ ಲಕ್ಮೇಶ್ವರ ತಾಲೂಕಿಗೂ ಸಹ ೮.೬೦ಕೋಟಿ ರೂ.ಗಳ ಅನುಮೋದನೆ ದೊರೆತಿದೆ. ಶೀಘ್ರದಲ್ಲಿಯೇ ಲಕ್ಮೇಶ್ವರ ಜನತೆಯ ಬಹುದಿನಗಳ ಕನಸು ಸಾಕಾರಗೊಳ್ಳಲಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.