ಹಾವೇರಿ: ರಾಜಕೀಯ ಸಮ್ಮೇಳನಗಳಿಗೆ ಸರ್ಕಾರದ ಹಣ ಬಳಸೋದು ಎಷ್ಟರ ಮಟ್ಟಿಗೆ ಸರಿ ಎಂದು ಮಾಜಿ ಸಿಎಂ, ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಪ್ರಶ್ನೆ ಮಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿವೇಶನಕ್ಕೆ ಸರ್ಕಾರದ ಹಣ ಬಳಸ್ತಿರೋದು ಎಷ್ಟು ಸರಿ? ಇದು ಯಾವ ಕಾನೂನಿನಲ್ಲಿದೆ? ರಾಜಕೀಯ ಸಮ್ಮೇಳನಗಳಿಗೆ ಸರ್ಕಾರದ ಹಣ ಬಳಸೋದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದ್ದಾರೆ.
ಇನ್ನೂ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣ ಕುರಿತಂತೆ ಮಾತನಾಡಿದ ಬೊಮ್ಮಾಯಿ, ಅಧಿಕಾರದ ಮದ, ಅಧಿಕಾರದ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ರಾಜ್ಯ ಸರ್ಕಾರ ವಿರೋದ ಪಕ್ಷಗಳನ್ನು ದಮನ ಮಾಡಲು ಪ್ರಜಾಪ್ರಭುತ್ವ ವಿರೋಧಿ ಕ್ರಮ ಅನುಸರಿಸುತ್ತಿದೆ. ಇಂಥ ಪ್ರಕರಣಗಳು ಸಾಕಷ್ಟು ನಡೆದಿವೆ. ಆದರೆ ಇನ್ನೂ ಕೆಲವು ಪ್ರಕರಣಗಳು ಬೆಳಕಿಗೆ ಬಂದಿಲ್ಲ ಎಂದು ಹೇಳಿದರು.



