ಇಂದು ಬಿಹಾರ, ನಾಳೆ ಕರ್ನಾಟಕ: ಬಿಜೆಪಿ ಯುವ ಮುಖಂಡ ವಸಂತ ಪಡಗದ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಬಿಜೆಪಿ ಪಕ್ಷದ ವಿರುದ್ಧ ಪದೇ ಪದೇ ಕಾಂಗ್ರೆಸ್ ವೋಟ್ ಚೋರಿ ಮೂಲಕ ಅಧಿಕಾರ ಪಡೆದಿದೆ ಎಂದು ಆರೋಪಿಸಿದ್ದಕ್ಕೆ ಮತದಾರರು ಎನ್‌ಡಿಎ ಕೂಟಕ್ಕೆ ಸ್ಪಷ್ಟ ಬಹುಮತ ನೀಡುವ ಮೂಲಕ ವೋಟ್ ಚೋರಿಕೋರರನ್ನು ವಿಳಾಸವಿಲ್ಲದಂತೆ ಮಾಡಿದ್ದಾರೆ, ಇದೇ ರೀತಿ 2028ರ ಕರ್ನಾಟಕ ವಿಧಾನಸಭಾ ಚುನಾವಣೆಯ ಎಲ್ಲ ಕ್ಷೇತ್ರದಲ್ಲೂ ಬಿಜೆಪಿ ತನ್ನ ಬಾವುಟ ಹಾರಿಸುತ್ತದೆ ಎಂದು ಬಿಜೆಪಿ ಯುವ ಮುಖಂಡ ವಸಂತ ಪಡಗದ ಅಭಿಪ್ರಾಯಪಟ್ಟಿದ್ದಾರೆ.

Advertisement

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಳೆದ ಎರಡು ವರ್ಷಗಳ ಅವಧಿಯಲ್ಲಿ ಜನಮನ್ನಣೆ ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲೂ ಧೂಳೀಪಟ ಆಗಿ ಕಮಲ ಅರಳುವುದು ಗ್ಯಾರಂಟಿ ಎಂದು ಹೇಳಿದ್ದಾರೆ.

ಆದ್ದರಿಂದಲೇ ರಾಹುಲ್ ಗಾಂಧಿ ಮುಖಭಂಗ ತಪ್ಪಿಸಿಕೊಳ್ಳಲು ವೋಟ್ ಚೋರಿ ಎಂಬ ಕಟ್ಟುಕಥೆ ಮೂಲಕ ಜನರ ದಿಕ್ಕು ತಪ್ಪಿಸಲು ಹೊರಟಿದ್ದು. ಕಾಂಗ್ರೆಸ್ ಪಕ್ಷ ಮತ್ತು ರಾಹುಲ್ ಗಾಂಧಿ ಅವರ ವೋಟ್ ಚೋರಿ ಪ್ರಹಸನವನ್ನು ಸರಳಸಗಟಾಗಿ ತಿರಸ್ಕರಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ನಿತೀಶ್ ಕುಮಾರ್ ಅವರ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಮತ್ತೊಮ್ಮೆ ಸ್ಪಷ್ಟ ಜನಾದೇಶ ನೀಡಿದ್ದಾರೆ. ಈಗಲಾದರೂ ಕಾಂಗ್ರೆಸ್ ನಿದ್ದೆಯಿಂದ ಎದ್ದೇಳಬೇಕು, ದೇಶದ ಮತದಾರರು ಪ್ರಜ್ಞಾವಂತರಾಗಿದ್ದಾರೆ ಎಂದಿದ್ದಾರೆ.

 


Spread the love

LEAVE A REPLY

Please enter your comment!
Please enter your name here