ಬೆಂಗಳೂರು: ನಟ ದರ್ಶನ್ ಮತ್ತು ಅವರ ಗ್ಯಾಂಗ್‌ನಿಂದ ನಡೆದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಟ್ರಯಲ್ ಇಂದಿನಿಂದ ಸೆಷನ್ಸ್ ಕೋರ್ಟ್‌ನಲ್ಲಿ ಆರಂಭಗೊಳ್ಳಲಿದೆ.
Advertisement
ಈ ಹಿಂದೆ, ನ್ಯಾಯಾಲಯವು ಈಗಾಗಲೇ ಎಲ್ಲಾ ಆರೋಪಿಗಳ ವಿರುದ್ಧ ಆರೋಪಗಳನ್ನು ನಿಗದಿಪಡಿಸಿದೆ. ಹೌದು ಕಳೆದ ಬಾರಿ ಕೋರ್ಟ್ ಆರೋಪಿಗಳ ವಿರುದ್ಧ ಚಾರ್ಜ್ ಫ್ರೇಮ್ ನಿಗದಿ ಮಾಡಿತ್ತು. ಇಂದು ಬೆಳಗ್ಗೆ 11 ಗಂಟೆ ನಂತರ ಕೋರ್ಟ್ ಟ್ರಯಲ್ ದಿನಾಂಕ ನಿಗದಿ ಮಾಡಲಿದೆ.
ಹಾಗಾಗಿ ಇಂದು ಎಲ್ಲಾ ಆರೋಪಿಗಳನ್ನು ಕೋರ್ಟ್ಗೆ ಹಾಜರಾಗಲು ಸೂಚಿಸಿದ್ದು, ನಟ ದರ್ಶನ್ ಸೇರಿ ಒಟ್ಟು 6 ಮಂದಿ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಲಿದ್ದಾರೆ. ಉಳಿದ ಎಲ್ಲಾ ಆರೋಪಿಗಳು ನೇರವಾಗಿ ಕೋರ್ಟ್ಗೆ ಹಾಜರಾಗಲಿದ್ದಾರೆ.ಈ ಪ್ರಕರಣವು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ನ್ಯಾಯಾಲಯದ ವಿಚಾರಣೆ ಕುತೂಹಲ ಕೆರಳಿಸಿದೆ.


