ಬೆಂಗಳೂರು:- ಇಂದು ಮಾಜಿ ಸಿಎಂ, ಕೇಂದ್ರ ಸಚಿವರು ಆಗಿರುವ ಹೆಚ್.ಡಿ ಕುಮಾರಸ್ವಾಮಿ ಅವರಿಗೆ 66ನೇ ಹುಟ್ಟುಹಬ್ಬದ ಸಂಭ್ರಮ ಮನೆ ಮಾಡಿದೆ.
ಕಾರ್ಯಕರ್ತರು, ಅಭಿಮಾನಿಗಳು, ರಾಜಕೀಯ ನಾಯಕರು ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಶುಭ ಕೋರುತ್ತಿದ್ದಾರೆ. ಅದರಂತೆ ಪ್ರಧಾನಿ ಮೋದಿ ಅವರು ಕೂಡ ಕುಮಾರಸ್ವಾಮಿ ಅವರಿಗೆ X ನಲ್ಲಿ ಶುಭಾಶಯ ತಿಳಿಸಿದ್ದಾರೆ. ಕೇಂದ್ರ ಸಚಿವರಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಉಕ್ಕು ಮತ್ತು ಭಾರೀ ಕೈಗಾರಿಕೆಗಳಲ್ಲಿ ತಮ್ಮ ಕೆಲಸದ ಮೂಲಕ ಆತ್ಮನಿರ್ಭರತೆಯತ್ತ ನಮ್ಮ ಪ್ರಯತ್ನಗಳನ್ನು ಬಲಪಡಿಸುತ್ತಿದ್ದೀರ. ಸಮಾಜ ಸೇವೆಯಲ್ಲಿ ನಿಮಗೆ ದೀರ್ಘ ಮತ್ತು ಆರೋಗ್ಯಕರ ಜೀವನ ಸಿಗಲಿ ಎಂದು ಹಾರೈಸಿದ್ದಾರೆ.
ಮೋದಿಯ ಹಾರೈಕೆಗೆ ಭಾವುಕಾರ ಕುಮಾರಸ್ವಾಮಿ, ಪ್ರಧಾನಿಯವರ ಶುಭಾಶೀರ್ವಾದದಿಂದ ನಾನು ಭಾವುಕನಾಗಿದ್ದೇನೆ . ಅವರ ಪಿತೃವಾತ್ಸಲ್ಯಕ್ಕೆ ನಾನು ಧನ್ಯನಾಗಿದ್ದೇನೆ. ಮಾನ್ಯ ಪ್ರಧಾನಿಗಳ ಚಿಂತನಶೀಲ ಮಾರ್ಗದರ್ಶನ, ಪ್ರೋತ್ಸಾಹ ಮತ್ತು ನನ್ನ ಮೇಲಿನ ನಂಬಿಕೆಗೆ ನಾನು ಚಿರಋಣಿ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.



