SSLC Result: ನಾಳೆ SSLC ಪರೀಕ್ಷೆ ಫಲಿತಾಂಶ ಪ್ರಕಟ! ಆನ್ ಲೈನ್ʼನಲ್ಲಿ ಹೀಗೆ ಚೆಕ್ ಮಾಡಿ

0
Spread the love

ಬೆಂಗಳೂರು: 10 ನೇ ತರಗತಿ ಫಲಿತಾಂಶ ಪ್ರಕಟಕ್ಕೆ ದಿನ ನಿಗದಿಯಾಗಿದೆ. SSLC ಅಧಿಕೃತ ವೆಬ್‌ಸೈಟ್ – karresults.nic.in ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಮೇ 2 ರಂದು ಪ್ರಕಟವಾಗಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ.

Advertisement

ಮಧ್ಯಾಹ್ನ 12.30ರ ನಂತರ ವೆಬ್‌ಸೈಟ್‌ನಲ್ಲಿ SSLC ಫಲಿತಾಂಶ ಲಭ್ಯವಾಗಲಿದೆ. http://karresults.nic.in ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಮಾರ್ಚ್‌, ಏಪ್ರಿಲ್ ತಿಂಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲಾಗಿದೆ. 8,96,447 ವಿದ್ಯಾರ್ಥಿಗಳು ಹಾಜರಾಗಿದ್ದರು. 15,881 ಶಾಲೆಗಳ ವಿದ್ಯಾರ್ಥಿಗಳು 2,818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದಾರೆ.

ಫಲಿತಾಂಶವನ್ನು ಆನ್ಲೈನ್ನಲ್ಲಿ ನೋಡುವುದು ಹೇಗೆ? ವೈಬ್ಸೈಟ್ ಯಾವುದು? ಕ್ರಮ ಹೇಗೆ? ಎಂಬೆಲ್ಲ ಮಾಹಿತಿ ಇಲ್ಲಿದೆ. ಕಳೆದ ವರ್ಷ, ಕೆಎಸ್ಇಎಬಿ ಮೇ 9 ರಂದು ಎಸ್ಎಸ್ಎಲ್ಸಿ ಪರೀಕ್ಷೆ-1 ಫಲಿತಾಂಶಗಳನ್ನು ಪ್ರಕಟಿಸಿತ್ತು.

ಆನ್ಲೈನ್ನಲ್ಲಿ ನೋಡುವುದು ಹೇಗೆ?

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC ಅಥವಾ 10 ನೇ ತರಗತಿಯ ಬೋರ್ಡ್ ಪರೀಕ್ಷಾ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ https://kseab.karnataka.gov.in ಅಥವಾ https://karresults.nic.in ನಲ್ಲಿ ಪ್ರಕಟಿಸಲಿದೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಫಲಿತಾಂಶ ಪಡೆಯಬಹುದಾಗಿದೆ.

1. karresults.nic.in ನಲ್ಲಿ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ.

2. 2025ರ ಎಸ್ಎಸ್ಎಲ್ಸಿ ಪರೀಕ್ಷೆ-1 ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ.

3. ನಂತರ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ 2025 ಲಾಗಿನ್ ಪೇಜ್ ತೆರೆದುಕೊಳ್ಳುತ್ತದೆ.

4. ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.

5. ಬಳಿಕ, SSLC. Karnataka.gov.in ನಲ್ಲಿ ಆನ್ಲೈನ್ ಫಲಿತಾಂಶ ಅಂಕಪಟ್ಟಿಯ ಮುದ್ರಣವನ್ನು ತೆಗೆದುಕೊಳ್ಳಿ.

SMS ಮೂಲಕ ಪರಿಶೀಲಿಸುವುದು ಹೇಗೆ?

KAR 10 ಅಂತ ಬರೆದು ಸ್ಪೇಸ್ ಬಿಟ್ಟು ನೋಂದಣಿ ಸಂಖ್ಯೆ ಟೈಪ್ ಮಾಡಿ 56263ಗೆ ಸಂದೇಶ ಕಳುಹಿಸಿ. ಫಲಿತಾಂಶವನ್ನು ವಿದ್ಯಾರ್ಥಿಗಳು ಅದೇ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ.


Spread the love

LEAVE A REPLY

Please enter your comment!
Please enter your name here