ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ನಾಳೆ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
Advertisement
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಹಾಸನ, ಕೊಡಗು ಸುತ್ತಮುತ್ತ ಭಾಗಗಳಲ್ಲಿ ಮಳೆ ಜೋರಾಗಿರಲಿದೆ. ಮೂಡಿಗೆರೆ, ಬಾಳೆಹೊನ್ನೂರು, ಶೃಂಗೇರಿ, ಕುದುರೆಮುಖ, ಆಗುಂಬೆಯಲ್ಲೂ ಮಳೆ ಹೆಚ್ಚಾಗಿರಲಿದೆ.
ರಾಮನಗರ, ದಾವಣಗೆರೆ, ಕೋಲಾರ, ಮಂಡ್ಯ, ಶಿವಮೊಗ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿಯಲ್ಲೂ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.