ಬಳ್ಳಾರಿ:– ಧಾರಾಕಾರ ಮಳೆಯಿಂದ ಇಲ್ಲಿನ ಕೂಡ್ಲಿಗಿ ದೊಡ್ಡ ಕೆರೆ ಕೋಡಿ ಬಿದ್ದಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿದೆ.
Advertisement
ತಡರಾತ್ರಿ ಸುರಿದ ಭಾರೀ ಮಳೆಗೆ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಮೆಕ್ಕೆಜೋಳ, ಜೋಳ, ಶೇಂಗಾ ಬೆಳೆಯುವ ರೈತರಿಗೆ ಸದ್ಯ ಮಳೆಯ ಅವಶ್ಯಕತೆ ಇತ್ತು. ಮತ್ತೊಂದೆಡೆ ಕೂಡ್ಲಿಗಿ ದೊಡ್ಡ ಕೆರೆ ಕೋಡಿ ಬಿದ್ದ ಪರಿಣಾಮ ಕೆರೆ ಕೋಡಿ ಬಿದ್ದ ಜಾಗ ಪ್ರವಾಸಿತಾಣದಂತಾಗಿದ್ದು,
ಕೆರೆಯ ಮುಂಭಾಗ ಮೊಬೈಲ್ ಮೂಲಕ ಸೆಲ್ಫಿ ತೆಗೆದುಕೊಳ್ಳಲು ಯುವಕರು ಮುಂದಾಗುತ್ತಿದ್ದಾರೆ.ಇನ್ನೂ ಕೂಡ್ಲಿಗಿ ಹಾಗೂ ಸುತ್ತಮುತ್ತ ಬಾರಿ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.