ಬೆಂಗಳೂರು:- ಬೆಂಗಳೂರಿನ ಹಲವೆಡೆ ಶುಕ್ರವಾರ ಧಾರಾಕಾರ ಮಳೆಯಾಗಿದ್ದು, ರಸ್ತೆಗಳೆಲ್ಲವೂ ಮಳೆ ನೀರಿನಿಂದ ತುಂಬಿಹೋಗಿವೆ.
ಶುಕ್ರವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಹಲವಾರು ರಸ್ತೆಗಳಲ್ಲಿ ಮಳೆ ನೀರು ನಿಂತಿದೆ. ರಾಯಸಂದ್ರದಿಂದ ಚೂಡಸಂದ್ರದ ಕಡೆಗೆ, ವರ್ತೂರಿನಿಂದ ಗುಂಜೂರು ಕಡೆಗೆ, ಐಟಿಐ ಗೇಟ್‌ನಿಂದ ಕಸ್ತೂರಿನಗರ ಕಡೆಗೆ, ವೀರಸಂದ್ರದಿಂದ ಹುಸ್ಕೂರು ಗೇಟ್ ಕಡೆಗೆ, ಹೆಬ್ಬಾಳದಿಂದ ವಿಮಾನ ನಿಲ್ದಾಣದ ಕಡೆಗೆ, ಬೊಮ್ಮನಹಳ್ಳಿಯಿಂದ ರೂಪೇನ ಅಗ್ರಹಾರ ಕಡೆಗೆ, ಅಯ್ಯಪ್ಪ ಅಂಡರ್‌ಪಾಸ್ ಮಡಿವಾಳದಿಂದ ಎಸ್‌ಪಿ ರಸ್ತೆಯ ಕಡೆಗೆ ಹೋಗುವ ಮಾರ್ಗಗಳು ಜಲಾವೃತವಾಗಿವೆ. ಈ ಹಿನ್ನೆಲೆ ಸಂಚಾರ ದಟ್ಟಣೆಯೂ ಇರುತ್ತದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.
ರಾಯಸಂದ್ರದಿಂದ ಚೂಡಸಂದ್ರದ, ವರ್ತೂರಿನಿಂದ ಗುಂಜೂರು , ಐಟಿಐ ಗೇಟ್‌ನಿಂದ ಕಸ್ತೂರಿನಗರ , ವೀರಸಂದ್ರದಿಂದ ಹುಸ್ಕೂರು ಗೇಟ್, ಹೆಬ್ಬಾಳದಿಂದ ವಿಮಾನ ನಿಲ್ದಾಣದ , ಬೊಮ್ಮನಹಳ್ಳಿಯಿಂದ ರೂಪೇನ ಅಗ್ರಹಾರ , ಅಯ್ಯಪ್ಪ ಅಂಡರ್‌ಪಾಸ್ ಮಡಿವಾಳದಿಂದ ಎಸ್‌ಪಿ ಈ ಎಲ್ಲಾ ಪ್ರದೇಶಗಳಲ್ಲಿ ಮಳೆ ನೀರು ರಸ್ತೆಯಲ್ಲಿ ನಿಂತಿರುವುದರಿಂದ ನಿಧಾನಗತಿಯ ಸಂಚಾರವಿರಲಿದೆ. ಈ ಬಗ್ಗೆ ಸಂಚಾರಿ ಪೊಲೀಸರು ಮಾಹಿತಿ ನೀಡಿದ್ದಾರೆ.