ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಹೆಚ್‍ಎಎಲ್‍ನಲ್ಲಿ ವಿವಾಹಿತ ಮಹಿಳೆಗೆ ಪ್ರೀತಿಸುವಂತೆ ಟಾರ್ಚರ್ ಕೊಡುತ್ತಿದ್ದ ಯುವಕನಿಗೆ ಬುದ್ಧಿ ಹೇಳಲು ಬಂದಿದ್ದಕ್ಕೆ ಕತ್ತು ಸೀಳಿ ಕೊಲೆಗೆ ಯತ್ನಿಸಿದ ಘಟನೆ ಜರುಗಿದೆ.
ಇನ್ಸ್ಟಾಗ್ರಾಮ್‍ನಲ್ಲಿ ಪರಿಚಯವಾಗಿದ್ದ ವಿವಾಹಿತ ಮಹಿಳೆಗೆ ಯುವಕ ಸೆಲ್ವ ಕಾರ್ತಿಕ್ ಪ್ರೀತಿಸುವಂತೆ ಪೀಡಿಸುತ್ತಿದ್ದ. ಇದೇ ವಿಚಾರಕ್ಕೆ ಯುವಕನನ್ನು ಮಾತನಾಡಲು ಹೆಚ್‍ಎಎಲ್ ಬಳಿ ಬರಲು ಮಹಿಳೆಯ ತಂದೆ ಹಾಗೂ ಸಂಬಂಧಿಯೊಬ್ಬರು ಹೇಳಿದ್ದರು. ಈ ವೇಳೆ ಆರೋಪಿ ಕೊಲೆಗೆ ಯತ್ನಿಸಿದ್ದಾನೆ.
ಮಾತುಕತೆಗೆ ಕರೆಸಿದ್ದ ಮಹಿಳೆ ತಂದೆ ಹಾಗೂ ಸಂಬಂಧಿ, ಕಾರ್ತಿಕ್‍ನನ್ನು ಬೈಕ್‍ನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದರು. ಈ ವೇಳೆ, ಚಲಿಸುತ್ತಿದ್ದ ಬೈಕ್‍ನಲ್ಲಿಯೇ ಆರೋಪಿ, ಸತೀಶ್ ಎಂಬುವರ ಕುತ್ತಿಗೆ ಕೊಯ್ದು ಹತ್ಯೆಗೆ ಯತ್ನಿಸಿದ್ದಾನೆ. ಆರೋಪಿ ಬಂಧಿಸಿರುವ ಹೆಚ್‍ಎಎಲ್ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.
ಗಾಯಾಳುವಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜುಲೈ 17ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.