ನಾಳೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಂಚಾರ ಬಂದ್: ಕಂಪ್ಲೀಟ್ ವಿವರ ಇಲ್ಲಿದೆ!

0
Spread the love

ಬೆಂಗಳೂರು:- ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಫೆಬ್ರವರಿ 5 ರಿಂದ ಒಟ್ಟು 29 ಗಂಟೆಗಳ ಕಾಲ ವಿಮಾನಗಳ ಟೇಕಾಫ್ ಮತ್ತು ಲ್ಯಾಂಡಿಂಗ್‌ನಲ್ಲಿ ವ್ಯತ್ಯಯ ಉಂಟಾಗಲಿದೆ.

Advertisement

ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ಕಾರಣ ಒಟ್ಟು 29 ಗಂಟೆಗಳ ಕಾಲ ವಿಮಾನ ನಿಲ್ದಾಣದಲ್ಲಿ ಟೇಕಾಫ್, ಲ್ಯಾಂಡಿಂಗ್ ಸ್ಥಗಿತಗೊಳ್ಳಲಿದೆ. ಈ ಬಗ್ಗೆ ಬೆಂಗಳೂರು ವಿಮಾನ ನಿಲ್ದಾಣ ಆಡಳಿತ ಮಾಹಿತಿ ನೀಡಿದೆ. ಏರ್ ಶೋ ಕಾರ್ಯಕ್ರಮದ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.

ವಿಮಾನ ಪ್ರಯಾಣಿಕರು ಟೇಕಾಫ್, ಲ್ಯಾಂಡಿಂಗ್ ಸ್ಥಗಿತಗೊಳ್ಳಲಿರುವ ಸಮಯವನ್ನು ಗಮನಿಸಿಕೊಂಡು ಪ್ರಯಾಣದ ಯೋಜನೆ ರೂಪಿಸುವಂತೆ ಬೆಂಗಳೂರು ವಿಮಾನ ನಿಲ್ದಾಣ ಆಡಳಿತ ಸಲಹೆ ನೀಡಿದೆ.

ಫೆಬ್ರವರಿ 5ರಿಂದ 15ರ ವರೆಗೆ 10 ದಿನಗಳ ಅವಧಿಯಲ್ಲಿ ವಿವಿಧ ಸಮಯಗಳಲ್ಲಿ ಏರ್​ಪೋರ್ಟ್ ಕಾರ್ಯಾಚರಣೆ ಬಂದ್ ಆಗಿರಲಿದೆ. ದಿನಾಂಕಗಳು ಮತ್ತು ಏರ್​ಪೋರ್ಟ್ ಕಾರ್ಯಾಚರಣೆ ಸ್ಥಗಿತವಾಗಲಿರುವ ಸಮಯದ ಮಾಹಿತಿ ಇಲ್ಲಿದೆ.

ಫೆಬ್ರವರಿ 5: ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಮಧ್ಯಾಹ್ನ 3 ರಿಂದ ಸಂಜೆ 4:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.

ಫೆಬ್ರವರಿ 6: ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಮಧ್ಯಾಹ್ನ 3 ರಿಂದ ಸಂಜೆ 4:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.

ಫೆಬ್ರವರಿ 7: ಬೆಳಿಗ್ಗೆ 09 ರಿಂದ 11 ರವರೆಗೆ ಮತ್ತು ಮಧ್ಯಾಹ್ನ 3 ರಿಂದ ಸಂಜೆ 4:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.

ಫೆಬ್ರವರಿ 8: ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಮಧ್ಯಾಹ್ನ 3 ರಿಂದ ಸಂಜೆ 4:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.

ಫೆಬ್ರವರಿ 9: ಬೆಳಿಗ್ಗೆ 9 ರಿಂದ 11 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.

ಫೆಬ್ರವರಿ 10: ಬೆಳಿಗ್ಗೆ 9 ರಿಂದ 11:30 ರವರೆಗೆ ಮತ್ತು ಮಧ್ಯಾಹ್ನ 2:30 ರಿಂದ 3:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.

ಫೆಬ್ರವರಿ 11-12: ಮಧ್ಯಾಹ್ನ 12:00 ರಿಂದ 2:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.

ಫೆಬ್ರವರಿ 13-14: ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಮಧ್ಯಾಹ್ನ 2:30 ರಿಂದ ಸಂಜೆ 5:00 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.


Spread the love

LEAVE A REPLY

Please enter your comment!
Please enter your name here