ಟ್ರಾಫಿಕ್ ಫೈನ್ 50% ಡಿಸ್ಕೌಂಟ್ ಆಫರ್: 15 ದಿನದಲ್ಲಿ 45 ಕೋಟಿ ರೂ.ದಾಟಿದ ಪಾವತಿ!

0
Spread the love

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಮಗಳ ಉಲ್ಲಂಘನೆ ದಂಡ ಪಾವತಿಗೆ 50% ಡಿಸ್ಕೌಂಟ್ ನೀಡಿರುವುದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, 15 ದಿನದಲ್ಲಿ 45 ಕೋಟಿ ರೂ. ಗೂ ಹೆಚ್ಚಿನ ದಂಡ ಮೊತ್ತ ಪಾವತಿ ಆಗಿದೆ.

Advertisement

ಎಸ್, 50% ರಷ್ಟು ಆಫರ್ ಅನ್ವಯ ವಾಹನ ಮಾಲೀಕರು 16,21,721 ಬಾಕಿ ಕೇಸ್‌ಗಳಿಗೆ ದಂಡ ಪಾವತಿಸಿದ್ದು, ಈ ಮೂಲಕ ಇಲ್ಲಿವರೆಗೆ 45.52 ಕೋಟಿ ರೂ. ದಂಡ ಪಾವತಿಯಾಗಿದೆ. ಬೆಂಗಳೂರು ಸಂಚಾರಿ ಪೊಲೀಸರು ವಾಹನ ಸವಾರರಿಗೆ ಆ.23ರಿಂದ ದಂಡ ಪಾವತಿಸಲು ರಿಯಾಯಿತಿ ನೀಡಿದ್ದರು. ಇನ್ನೂ ಸೆ.12ರವರೆಗೆ ದಂಡ ಪಾವತಿ ಮಾಡಲು ಕಾಲಾವಕಾಶವಿದ್ದು, ಕೇವಲ ಬೆಂಗಳೂರು ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘಿಸಿದವರಿಗೆ ಮಾತ್ರ ದಂಡ ಪಾವತಿಸಲು ಅವಕಾಶವಿರುತ್ತದೆ.

ಈ ಕುರಿತು ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್ ಆದೇಶ ಹೊರಡಿಸಿ, ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಮಾಲೀಕರು ಆ.23ರಿಂದ ಸೆ.12ರವರೆಗೂ ದಂಡದ ಕೇವಲ 50% ಮೊತ್ತವನ್ನು ಪಾವತಿಸುವಂತೆ ರಿಯಾಯಿತಿ ಘೋಷಿಸಿದ್ದರು. ಅದರಂತೆ ವಾಹನ ಮಾಲೀಕರು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ.


Spread the love

LEAVE A REPLY

Please enter your comment!
Please enter your name here