ರಾಯಚೂರು :- ರಾಯಚೂರು ತಾಲೂಕಿನ ಗಟ್ಟುಬಿಚ್ಚಾಲಿ ಗ್ರಾಮದಲ್ಲಿ ಗಣೇಶನ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ಜರುಗಿದೆ.
22 ವರ್ಷದ ನರಸಿಂಹ ಮೃತ ದುರ್ದೈವಿ. ಹನುಮಾಪುರ ಬಳಿ ರಾಜೊಳ್ಳಿಬಂಡಾ ಕಾಲುವೆಯಲ್ಲಿ ಗಣೇಶ ವಿಸರ್ಜನೆಗೆ ಹೊರಟಿದ್ದ ವೇಳೆ ಬೊಲೆರೋ ಪಿಕಪ್ ಮೇಲೆ ಗಣೇಶನನ್ನ ಹಿಡಿದು ಕುಳಿತಿದ್ದ ಯುವಕನಿಗೆ ವಿದ್ಯುತ್ ಸ್ಪರ್ಶಿಸಿದೆ.
ಬೊಲೆರೋ ಪಿಕಪ್‌ನಲ್ಲಿದ್ದ ಇನ್ನುಳಿದ ಯುವಕರು ವಿದ್ಯುತ್ ಸ್ಪರ್ಶಿಸಿದ ಕೂಡಲೇ ಕೆಳಗೆ ಬಿದ್ದ ಪರಿಣಾಮ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಳೆಯ ನಡುವೆಯೇ ಅದ್ದೂರಿಯಾಗಿ ಗಣೇಶನ ಮೆರವಣಿಗೆ ನಡೆಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.



