ಹಾಸನ:- ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಹೋಗುತ್ತಿದ್ದ ಜನರ ಮೇಲೆ ಟ್ರಕ್ ಹರಿದು ನಾಲ್ವರು ಸಾವನ್ನಪ್ಪಿರುವ ಘಟನೆ ಜರುಗಿದೆ.
Advertisement
ಘಟನೆಯಲ್ಲಿ 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಇನ್ನು ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, ಗ್ರಾಮದಲ್ಲಿ ಜನರ ಆಕ್ರಂದನ ಮುಗಿಲು ಮುಟ್ಟಿದೆ.
ಇನ್ನು ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ರವಾನಿಸಲಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಗಳಿವೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಮಾಜಿ ಸಚಿವ ಎಚ್ಡಿ ರೇವಣ್ಣ, ಪರಿಷತ್ ಸದಸ್ಯ ಸೂರಜ್ ರೇವಣ್ಣ, ಸಂಸದ ಶ್ರೇಯಸ್ ಪಟೇಲ್ ಭೇಟಿ ನೀಡಿದ್ದು, ಈ ವೇಳೆ ಪೊಲೀಸ್ ವೈಫಲ್ಯದಿಂದ ಅವಘಡ ಸಂಭವಿಸಿದೆ ಎಂದು ರೇವಣ್ಣ ಕಿಡಿಕಾರಿದರು.