- ಚಿಕ್ಕಬಳ್ಳಾಪುರ: ಡೆತ್ನೋಟ್ ಬರೆದಿಟ್ಟು ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು 21 ವರ್ಷದ ಮಿಥುನ್ ಎಂದು ಗುರುತಿಸಲಾಗಿದೆ. ಚಿಂತಾಮಣಿ ಮೂಲದ ಶ್ರೀನಿವಾಸ್ ಮತ್ತು ಕುಸುಮ ದಂಪತಿಯ ಪುತ್ರನಾಗಿದ್ದ ಮಿಥುನ್, ಖಾಸಗಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ. ಚಿಕ್ಕಬಳ್ಳಾಪುರ ನಗರದ ಕೆಎಸ್ಆರ್ಟಿಸಿ ಡಿಪೋ ಮುಂಭಾಗದ ಬಾಡಿಗೆ ಕೊಠಡಿಯಲ್ಲಿ ವಾಸವಾಗಿದ್ದ ಈತ, ಅದೇ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆಗೂ ಮುನ್ನ ಮಿಥುನ್ ಡೆತ್ನೋಟ್ ಬರೆದಿಟ್ಟಿದ್ದಾನೆ. ಅದರಲ್ಲಿ, ‘ನನ್ನ ಸಾವಿಗೆ ನಾನೇ ಕಾರಣ. ನಾನು ಅಂದುಕೊಂಡಿದ್ದು ಆಗಿಲ್ಲ. ಮುಂದಿನ ಜನ್ಮದಲ್ಲಿ ನಿಮ್ಮ ಮಗನಾಗಿ ಹುಟ್ಟುತ್ತೇನೆ’ ಎಂದು ಪೋಷಕರಲ್ಲಿ ಕ್ಷಮೆ ಕೇಳಿದ್ದಾನೆ. ಅಲ್ಲದೆ, ತನ್ನ ಪ್ರೇಯಸಿಯ ಹೆಸರನ್ನೂ ಉಲ್ಲೇಖಿಸಿ ಕ್ಷಮೆ ಕೋರಿದ್ದಾನೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ವಿದ್ಯಾರ್ಥಿಯ ಸಾವಿಗೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.









