ಕೊಪ್ಪಳ: ವ್ಯಸನ ಮುಕ್ತ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪೊಲೀಸ್ ಪೇದೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕುಷ್ಟಗಿಯಲ್ಲಿ ನಡೆದಿದೆ.
ಮೃತರನ್ನು ಶರಣಪ್ಪ ಉಪ್ಪಾರ (49) ಎಂದು ಗುರುತಿಸಲಾಗಿದೆ. ಇವರು ಮುನಿರಾಬಾದ್ ಐಆರ್ಬಿಯಲ್ಲಿ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮದ್ಯ ವ್ಯಸನಕ್ಕೆ ಒಳಗಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ವ್ಯಸನ ಮುಕ್ತ ಕೇಂದ್ರಕ್ಕೆ ದಾಖಲಿಸಲಾಗಿತ್ತು ಎಂದು ತಿಳಿದುಬಂದಿದೆ.
ಎರಡು ದಿನಗಳ ಹಿಂದೆ ಶರಣಪ್ಪ ಅವರು ವ್ಯಸನ ಮುಕ್ತ ಕೇಂದ್ರದಿಂದ ತಮ್ಮನ್ನು ಮನೆಗೆ ಕರೆದುಕೊಂಡು ಹೋಗುವಂತೆ ಪತ್ನಿಗೆ ಕರೆ ಮಾಡಿದ್ದರು. ಆದರೆ ಮನೆಗೆ ಕರೆದುಕೊಂಡು ಹೋಗದಿದ್ದರಿಂದ ಮನನೊಂದು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.
ಈ ಘಟನೆ ಕುರಿತು ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



