ಶಿವಮೊಗ್ಗ: ಮನೆಯ ಬಳಿ ಆಟವಾಡುತ್ತಿದ್ದ ಎರಡು ವರ್ಷದ ಬಾಲಕನಿಗೆ ಹಾವು ಕಚ್ಚಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಸಾಗರ ತಾಲ್ಲೂಕಿನ ಕಲಸಿಪೇಟೆ ಗ್ರಾಮದಲ್ಲಿ ನಡೆದಿದೆ.
ಕಲಸಿಪೇಟೆ ನಿವಾಸಿಗಳಾದ ಅನಿಲ್ ಮತ್ತು ರೂಪ ದಂಪತಿಯ ಪುತ್ರ ಯುನೈ (2) ಮೃತಪಟ್ಟ ಬಾಲಕ.
ನಾಡಕಲಸಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲಸಿಪೇಟೆಯಲ್ಲಿ ಮನೆಯ ಬಳಿ ಬಾಲಕ ಆಟವಾಡುತ್ತಿದ್ದ ವೇಳೆ ಹಾವು ಕಚ್ಚಿದೆ ಎನ್ನಲಾಗಿದೆ.
ತಕ್ಷಣ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯಲು ಮುಂದಾದರೂ, ಆಸ್ಪತ್ರೆಗೆ ಸಾಗಿಸುವ ಮುನ್ನವೇ ಮಗು ಮೃತಪಟ್ಟಿದೆ ಎಂದು ತಿಳಿದುಬಂದಿದೆ. ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಈ ಘಟನೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.



