ಬೆಂಗಳೂರು:- ಮನೆಯಲ್ಲೇ ನೇಣು ಬಿಗಿದುಕೊಂಡು ಯುವತಿಯೋರ್ವಳು ಸೂಸೈಡ್ ಮಾಡಿಕೊಂಡ ಘಟನೆ ಬಾಗಲಗುಂಟೆಯ ಮಲ್ಲಸಂದ್ರದಲ್ಲಿ ಜರುಗಿದೆ.
Advertisement
ಮೃತ ಯುವತಿಯನ್ನು 25 ವರ್ಷದ ರುಚಿತಾ ಎಂದು ಗುರುತಿಸಲಾಗಿದೆ. ಹೊಸ ವರ್ಷದಂದೇ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿರುವ ಪ್ರಖ್ಯಾತ ಫಾರ್ಮಾ ಕಂಪನಿಯಲ್ಲಿ ರುಚಿತಾ ಕೆಲಸ ಮಾಡುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ನಂತರ ಸತ್ಯಾಸತ್ಯತೆ ತಿಳಿದು ಬರಲಿದೆ.