ಚಿಕ್ಕಮಗಳೂರು: ವಾಟರ್ ಹೀಟರ್ನಿಂದ ಕಾಯಿಸಿದ್ದ ನೀರಿನ ಬಕೆಟ್ ಮುಟ್ಟಿದ ಪರಿಣಾಮ ವಿದ್ಯುತ್ ಶಾಕ್ ತಗುಲಿ 8 ವರ್ಷದ ಬಾಲಕ ಮೃತಪಟ್ಟಿರುವ ದಾರುಣ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದಿದೆ.
ಮೃತ ಬಾಲಕನನ್ನು ನೀಲಾಂಶ್ (8) ಎಂದು ಗುರುತಿಸಲಾಗಿದೆ. ಈತ ಎರಡನೇ ತರಗತಿಯಲ್ಲಿ ಓದುತ್ತಿದ್ದ. ಭಾನುವಾರ (ನ.1) ಶಾಲೆಗೆ ರಜೆ ಇದ್ದ ಹಿನ್ನೆಲೆಯಲ್ಲಿ ಮನೆಯಲ್ಲಿ ಒಬ್ಬನೇ ಇದ್ದ ಬಾಲಕ, ಸ್ನಾನಕ್ಕಾಗಿ ನೀರು ಕಾಯಿಸಲು ಬಕೆಟ್ನಲ್ಲಿ ವಾಟರ್ ಹೀಟರ್ ಹಾಕಿದ್ದಾನೆ. ಬಳಿಕ ನೀರಿಗೆ ಕೈ ಹಾಕಿದಾಗ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಮನೆಗೆ ಬಂದ ಪೋಷಕರಿಗೆ ಕಾದಿತ್ತು ಆಘಾತ
ಪೋಷಕರು ಮನೆಗೆ ಮರಳಿದಾಗ ಘಟನೆ ಬೆಳಕಿಗೆ ಬಂದಿದೆ. ಮಗನನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ಬಾಲಕನ ಸಾವಿನಿಂದ ಸಖರಾಯಪಟ್ಟಣ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.










