ಚಿಕ್ಕೋಡಿ: ಕೃಷಿಹೊಂಡದಲ್ಲಿ ಈಜಲು ತೆರಳಿದ್ದ ಮೂವರು ಮಕ್ಕಳು ನೀರುಪಾಲಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಜರುಗಿದೆ.
13 ವರ್ಷದ ಪ್ರಥಮೇಶ ಕೆರಬಾ, 15 ವರ್ಷದ ಅಥರ್ವ ಸೌಂದಲಗೆ, 13 ವರ್ಷದ ಸಮರ್ಥ ಚೌಗಲೆ ಮೃತರು. ಬಾಲಕರು ಮನೆಗೆ ಬಾರದಿದ್ದಾಗ ಪೋಷಕರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಕೃಷಿಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವ ವಿಚಾರ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಚಿಕ್ಕೋಡಿ ತಹಸೀಲ್ದಾರ್ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ಮೃತದೇಹಗಳನ್ನು ರವಾನಿಸಿದ್ದಾರೆ. ಅಂಕಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆಯಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.



