ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಬಲಮುರಿ ಕ್ಷೇತ್ರದಲ್ಲಿ ನಡೆದಿದೆ. ಶ್ರೇಯಸ್(19) ಮೃತ ವಿದ್ಯಾರ್ಥಿಯಾಗಿದ್ದು, ಈತ ಪಾಲಹಳ್ಳಿ ಸಮೀಪದ ಖಾಸಗಿ ಕಾಲೇಜಿನಲ್ಲಿ ಪ್ರಥಮ ಬಿ.ಇ ಓದುತ್ತಿದ್ದ. ಮೂವರು ಸ್ನೇಹಿತರ ಜೊತೆಗೆ ಬಲಮುರಿಗೆ ಈಜಲೆಂದು ತೆರಳಿದ್ದ ವೇಳೆ ಘಟನೆ ನಡೆದಿದೆ.
ಈಜಲು ಬಾರದ ಹಿನ್ನೆಲೆ ಸ್ನೇಹಿತರು ನದಿ ದಡದಲ್ಲಿಯೇ ಕುಳಿತಿದ್ದರು. ಈಜು ಬರುತ್ತಿದ್ದರಿಂದ ಶ್ರೇಯಸ್ ಏಕಾಂಗಿಯಾಗಿ ನದಿಗಿಳಿದಿದ್ದ. ಈ ವೇಳೆ ಸುಳಿಗೆ ಸಿಲುಕಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಪ್ರಕರಣ ಸಂಬಂಧ ಕೆಆರ್‌ಎಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.



