ಬೆಂಗಳೂರು:- ಬನ್ನೇರುಘಟ್ಟ ರಸ್ತೆಯ ಅರಕೆರೆ ಬಳಿ ಸಿಗ್ನಲ್ ತಪ್ಪಿಸಲು ಹೋಗಿ ಶಾಲಾ ಬಸ್ಗೆ ಕಾರೊಂದು ಡಿಕ್ಕಿಯಾದ ಘಟನೆ ಜರುಗಿದೆ.
ಕಾರಿನ ಚಾಲಕ ಸಿಗ್ನಲ್ ತಪ್ಪಿಸಲು ವೇಗವಾಗಿ ನುಗ್ಗಿದ್ದು ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಬಸ್ನ ಮಧ್ಯೆ ಭಾಗಕ್ಕೆ ಕಾರು ಡಿಕ್ಕಿಯಾಗಿದ್ದು, ಕಾರಿನ ಮುಂಭಾಗ ಜಖಂ ಆಗಿದೆ. ಅಲ್ಲದೇ ಬಸ್ಗೂ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಪಘಾತದಲ್ಲಿ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಹುಳಿಮಾವು ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



