ರಾಮನಗರ:- ರಾಮನಗರ ತಾಲೂಕಿನ ರೇವಣಸಿದ್ದೇಶ್ವರ ಬೆಟ್ಟದಲ್ಲಿ ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದು ವೃದ್ಧ ಸಾವನ್ನಪ್ಪಿರುವ ಘಟನೆ ಜರುಗಿದೆ.
Advertisement
65 ವರ್ಷದ ರೇವಣ್ಣ ಮೃತ ದುರ್ದೈವಿ. ಇಂದು ಬೆಳಗ್ಗೆ ಕುಟುಂಬ ಸಮೇತ ರೇವಣಸಿದ್ದೇಶ್ವರ ಬೆಟ್ಟಕ್ಕೆ ಬಂದಿದ್ದ ರೇವಣ್ಣ, ದೇವರ ದರ್ಶನ ಮಾಡಲು ಬೆಟ್ಟ ಹತ್ತುವಾಗ ಕಾಲು ಜಾರಿ ಕಂದಕಕ್ಕೆ ಬಿದ್ದಿದ್ದಾರೆ. ಮೇಲಿಂದ ಬಿದ್ದ ರಭಸಕ್ಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದು, ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರೇವಣ್ಣ ಶವ ಮೇಲಕ್ಕೆತ್ತಿದ್ದಾರೆ. ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


