ನೆಲಮಂಗಲ:– ಬೆಂಗಳೂರು ಹೊರವಲಯ ನೆಲಮಂಗಲ ಬಳಿಯ ಗೆಜ್ಜಗದಹಳ್ಳಿ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆಯ ಸೆಂಟ್ರಿಂಗ್ ಕಳಚುವ ವೇಳೆ ಆಯತಪ್ಪಿ ಎರಡನೇ ಮಹಡಿಯಿಂದ ಬಿದ್ದು ಕಾರ್ಮಿಕ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಜರುಗಿದೆ.
Advertisement
34 ವರ್ಷದ ಬೀರಪ್ಪ ಮೃತ ಕಾರ್ಮಿಕ. ಇವರು ಯಾದಗಿರಿ ಜಿಲ್ಲೆಯ ಗೋಪಾಲಪುರ ಗ್ರಾಮದ ನಿವಾಸಿ ಎನ್ನಲಾಗಿದೆ. ಈತ ಕಳೆದ 8 ವರ್ಷದಿಂದ ಈ ಭಾಗದಲ್ಲಿ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ. ಬೀರಪ್ಪನಿಗೆ ಹೆಂಡತಿ, ಇಬ್ಬರು ಮಕ್ಕಳು ಇದ್ದು, ಬಡ ಕುಟುಂಬದಲ್ಲಿ ಜೀವನ ನಡೆಸುತ್ತಿದ್ದರು. ಸದ್ಯ ನೆಲಮಂಗಲ ಶವಾಗಾರದ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.