ದಾವಣಗೆರೆ: ದಾವಣಗೆರೆಯಲ್ಲಿ ಘೋರ ದುರಂತ ನಡೆದಿದ್ದು, ನಿರ್ಮಾಣ ಹಂತದ ಕಟ್ಟಡವೊಂದರ ನೀರಿನ ತೊಟ್ಟಿಗೆ ಬಿದ್ದು ಬಾಲಕ ಮೃತಪಟ್ಟಿರುವ ಘಟನೆ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗ್ರಾಮದಲ್ಲಿ ನಡೆದಿದೆ. ಅವಾಜ್ ಖಾನ್ (6) ಮೃತ ಬಾಲಕನಾಗಿದ್ದು,
ಮೂತ್ರ ವಿಸರ್ಜನೆಗೆ ತೆರಳಿದಾಗ ಆಯತಪ್ಪಿ ನೀರಿನ ತೊಟ್ಟಿಗೆ ಬಿದ್ದು ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದ್ದು, ತೊಟ್ಟಿಯಲ್ಲಿ ಚಪ್ಪಲಿ ತೇಲಾಡುತ್ತಿರುವುದನ್ನ ಗಮನಿಸಿದಾಗ ಬಾಲಕ ಸಾವನ್ನಪ್ಪಿರುವುದು ತಿಳಿದು ಬಂದಿದೆ.
ಸಿಸಿ ಕ್ಯಾಮರಾದಲ್ಲಿ ಬಾಲಕನ ಓಡಾಟದ ಕೊನೆಯ ಕ್ಷಣಗಳು ಸೆರೆಯಾಗಿದೆ. ಈ ಸಂಬಂಧ ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



