ಮಂಡ್ಯ: ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿ ಸಮೀಪದ ಕಾರ್ಕಳ್ಳಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಕಾರ್ಕಳ್ಳಿ ಗ್ರಾಮದ ರವಿಕುಮಾರ್(40) ಮೃತ ವ್ಯಕ್ತಿಯಾಗಿದ್ದು, ಗೌರಿ – ಗಣೇಶ ಹಬ್ಬದ ಅಂಗವಾಗಿ ಕಾರ್ಕಳ್ಳಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿತ್ತು.
ವಿಸರ್ಜನೆ ಅಂಗವಾಗಿ ಸೋಮವಾರ ಸಂಜೆ ಗ್ರಾಮದಲ್ಲಿ ಅದ್ದೂರಿಯಾಗಿ ಮೆರವಣಿಗೆ ಕೂಡ ನಡೆಸಲಾಗಿತ್ತು. ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲು ನೀರಿಗೆ ಇಳಿದಿದ್ದಾರೆ. ಆದರೆ, ನೀರಿನ ರಭಸಕ್ಕೆ ಬಸವರಾಜು ಎನ್ನುವವರು ಕೊಚ್ಚಿ ಹೋಗಿದ್ದಾನೆ. ತಕ್ಷಣವೇ ಸ್ಥಳೀಯರು ರಕ್ಷಣೆಗೆ ಮುಂದಾದರೂ ಸಹ ಯಾವುದೇ ಪ್ರಯೋಜನವಾಗಿಲ್ಲ.
ಇಂದು ಮುಂಜಾನೆಯಿಂದಲೇ ಕೆ.ಎಂ.ದೊಡ್ಡಿ ಪೋಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದು, ಇಲ್ಲಿಯವರೆಗೂ ಶವದ ಸಣ್ಣ ಸುಳಿವು ಸಹ ಪತ್ತೆಯಾಗಿಲ್ಲ. ಈ ಸಂಬಂಧ ಕೆ.ಎಂ.ದೊಡ್ಡಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.