ಘೋರ ದುರಂತ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

0
Spread the love

ಚಾಮರಾಜನಗರ : ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಗುಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಗುಂಬಳ್ಳಿ ಗ್ರಾಮದ ಅಭಯಗೌಡ (13), ಕೃಷ್ಷಾಪುರದ ವೃಷಬೇಂದ್ರ (14) ಮೃತ ದುರ್ದೈವಿಗಳಾಗಿದ್ದು,

Advertisement

ಬಾಲಕರಿಬ್ಬರು ಕೆರೆಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.

ವೃಷಬೇಂದ್ರ ಎಂಬ ಬಾಲಕನ ಶವ ಪತ್ತೆಯಾಗಿದ್ದು, ಮತೋರ್ವ ಬಾಲಕ ಅಭಯ್‌ಗೌಡನ ಶವಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ. ಯಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here