ಬೆಂಗಳೂರು: ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ ನಂ.1ರಲ್ಲಿ ನಿಲ್ಲಿಸಲಾಗಿದ್ದ ಖಾಲಿ ರೈಲು ಬೋಗಿಗೆ ಭಾನುವಾರ ತಡರಾತ್ರಿ ಬೆಂಕಿ ಹೊತ್ತಿಕೊಂಡಿದೆ.
ರಾತ್ರಿ ಸುಮಾರು 11.30ರ ವೇಳೆಗೆ ಬೋಗಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಇಡೀ ಬೋಗಿಯನ್ನು ಆವರಿಸಿದೆ. ದಟ್ಟ ಹೊಗೆ ಆವರಿಸಿದ್ದರೂ ಬೋಗಿಯಲ್ಲಿ ಪ್ರಯಾಣಿಕರು ಇಲ್ಲದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಬೋಗಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ರೈಲ್ವೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತು ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.



