ತರಬೇತಿ, ಪ್ರಮಾಣಪತ್ರ ವಿತರಣೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಬಸವೇಶ್ವರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ಎನ್.ಎಸ್.ಎಸ್ ಘಟಕದ ಆಶ್ರಯದಲ್ಲಿ ಭಾರತ ಸರಕಾರದ ಮಿನಿಸ್ಟ್ರಿ ಆಫ್ ಟೆಕ್ಸ್ಟೈಲ್ಸ್ ಇವರ ಸಹಯೋಗದಲ್ಲಿ ಬಿಎ/ಬಿಕಾಂ/ಬಿಎಸ್ಸಿ ವಿದ್ಯಾರ್ಥಿಗಳಿಗೆ ನಡೆದ ಕರಕುಶಲ ಪ್ರದರ್ಶನ ಮತ್ತು ಜಾಗೃತಿ ಅಭಿಯಾನದ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

Advertisement

ಸಮಾರಂಭದಲ್ಲಿ ಅತಿಥಿಗಳಾಗಿ ಸ್ಥಳೀಯ ಆಡಳಿತ ಮಂಡಳಿಯ ಸದಸ್ಯರಾದ ಅಮರೇಶ ಅಂಗಡಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸ್ವಯಂ ಉದ್ಯೋಗ ಮಾಡಲು ಬೇಕಾದ ಉತ್ತಮ ಜ್ಞಾನ ಮತ್ತು ತರಬೇತಿ ದೊರೆಯುವ ಇಂತಹ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.

ವೇದಿಕೆಯ ಮೇಲೆ ರಾಜೇಶ್ವರಿ ಕೆ.ಎಂ, ಪರ್ವತಿ ತಳವಾರ, ಸುಮಾ ಕೆ. ಗುಡದಳ್ಳಿ, ಮೈಲಾರಪ್ಪ ಆರ್. ಗಂಗಾಧರ, ಶಿವರಾಮ ನಾಯಕ, ಪೃಥ್ವಿರಾಜ ವಾಲ್ಮಿಕಿ ಮತ್ತು ಸಂತೋಷ ನಾಯಕ ಉಪಸ್ಥಿತರಿದ್ದರು.

ಸಮಾರಂಭದ ಅಧ್ಯಕ್ಷತೆಯನ್ನು ಪ್ರಾ. ಎಂ.ಎಂ. ಬುರಡಿ ವಹಿಸಿದ್ದರು.
ಪ್ರೊ. ಆನಂದ ದೇಸಾಯಿಪಟ್ಟಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.


Spread the love

LEAVE A REPLY

Please enter your comment!
Please enter your name here