ಮಂಗಳೂರು ಪೊಲೀಸ್ ಕಮಿಷನರೇಟ್‌’ನ 56 ಪೊಲೀಸ್ ಸಿಬ್ಬಂದಿ ವರ್ಗಾವಣೆ!

0
Spread the love

ಮಂಗಳೂರು:ಮಂಗಳೂರು ಪೊಲೀಸ್ ಕಮಿಷನರೇಟ್‌ನ 56 ಪೊಲೀಸ್ ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ. ಕರಾವಳಿಯಲ್ಲಿ ಕೋಮು ಸೌಹಾರ್ಧತೆಗೆ ಧಕ್ಕೆ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಇಲಾಖೆ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದೆ.

Advertisement

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಗೆ ಪರೋಕ್ಷವಾಗಿ ನೆರವಾಗಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪ ಮಾಡಿದ್ದ ಬಜ್ಪೆ ಠಾಣೆ ಹೆಡ್ ಕಾನ್ಸ್‌ಟೇಬಲ್ ರಶೀದ್ ಸೇರಿದಂತೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ 56 ಪೊಲೀಸ್ ಸಿಬ್ಬಂದಿಯನ್ನ ವರ್ಗಾವಣೆ ಮಾಡಲಾಗಿದೆ.

ಕೋಮು ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ವಿಶೇಷ ಟಾಸ್ಕ್​ಫೋರ್ಸ್ ಕೂಡ ರಚನೆ ಮಾಡಲಾಗಿದೆ. ಇದೀಗ ಪೊಲೀಸ್ ಇಲಾಖೆಯ ತಳಮಟ್ಟದಲ್ಲೂ ಭಾರೀ ಸರ್ಜರಿ ನಡೆಯುತ್ತಿದೆ. 56 ಪೊಲೀಸ್ ಸಿಬ್ಬಂದಿಯ ವರ್ಗಾವಣೆ ಮಾಡಿ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದು, ಇನ್ನೂ ನೂರಾರು ಸಂಖ್ಯೆಯಲ್ಲಿ ಸಿಬ್ಬಂದಿ ವರ್ಗಾವಣೆ ಸಾಧ್ಯತೆ ಇದೆ ಎನ್ನಲಾಗಿದೆ.

ಹಲವು ವರ್ಷಗಳಿಂದ ಒಂದೇ ಕಡೆ ಇದ್ದ ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ. ಬಜ್ಪೆ ಠಾಣೆ ಹೆಡ್ ಕಾನ್ಸ್‌ಟೇಬಲ್ ರಶೀದ್​ರನ್ನು ಮಂಗಳೂರು ಮಹಿಳಾ ಠಾಣೆಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ನಂತರ ಕಾಂಗ್ರೆಸ್ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಕೋಮಹಿಂಸಾಚಾರ ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ. ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಗೃಹ ಸಚಿವ ಡಾ. ಜಿ ಪರಮೇಶ್ವರ ಅವರನ್ನು ಬದಲಾವಣೆ ಮಾಡಬೇಕು ಎಂಬ ಅಗ್ರಹ ವ್ಯಕ್ತವಾಗಿತ್ತು.


Spread the love

LEAVE A REPLY

Please enter your comment!
Please enter your name here