ಸಾರಿಗೆ ನೌಕರರ ಮುಷ್ಕರ: ಕೋಲಾರದಲ್ಲಿ KSRTC ಬಸ್ʼಗೆ ಕಲ್ಲು ತೂರಾಟ

0
Spread the love

ಕೋಲಾರ: ಇಂದು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಬಸ್​ಗಳನ್ನು ರಸ್ತೆಗಿಳಿಸಿಲ್ಲ. ​ ಸರ್ಕಾರಕ್ಕೆ ಜೊತೆ ಸಭೆ ಮೇಲೆ ಸಭೆ ನಡೆದ್ರೂ ಅವರ ಬೇಡಿಕೆ ಈಡೇರಿಸಿಕಲ್ಲ. ಹೀಗಾಗಿ ಇಂದು ಬಸ್‌ ಸಂಚಾರ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಈ ಮಧ್ಯೆ ಬಸ್​ ಮುಷ್ಕರದ ಬಿಸಿ ಪ್ರಯಾಣಿಕರಿಗೆ ತಟ್ಟಿದೆ.

Advertisement

ಇನ್ನೂ ಕೋಲಾರ ನಗರದ ಬಸ್ ನಿಲ್ದಾಣದಲ್ಲಿ ಕೆಎಸ್​ಆರ್​ಟಿಸಿ ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ. ಮುಂಜಾನೆಯಿಂದ ಕೋಲಾರದಲ್ಲಿ ಬಸ್ ನಿಲ್ದಾಣ ಸ್ತಬ್ದವಾಗಿತ್ತು. 10 ಗಂಟೆ ವೇಳೆಗೆ ಅಧಿಕಾರಿಗಳು ಒಂದೆರಡು ಬಸ್ಸುಗಳನ್ನು ನಿಲ್ದಾಣಕ್ಕೆ ಕಳುಹಿಸಿದ್ದಾರೆ. ಈ ವೇಳೆ ಕಿಡಿಗೇಡಿಯಿಂದ ಕಲ್ಲು ತೂರಾಟ ನಡೆದಿದ್ದು, ಬಸ್ಸಿನ ಕಿಟಿಕಿ ಗಾಜು ಪುಡಿಯಾಗಿದೆ.


Spread the love

LEAVE A REPLY

Please enter your comment!
Please enter your name here