ಹೈಕೋರ್ಟ್ ಛೀಮಾರಿ ಬೆನ್ನಲ್ಲೇ ಸಾರಿಗೆ ನೌಕರರ ಮುಷ್ಕರ ವಾಪಸ್!

0
Spread the love

ಬೆಂಗಳೂರು: ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರದಿಂದ ಜನಸಾಮಾನ್ಯರು ಪರದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಸಾರಿಗೆ ನೌಕರರ ಸಂಘಟನೆಗಳಿಗೆ ನೋಟಿಸ್ ಜಾರಿ ಮಾಡಿದ್ದು, ಕಾನೂನು ಬಾಹಿರ ಮುಷ್ಕರವನ್ನು ವಿರೋಧಿಸಿದೆ. ಹೌದು  ಹೈಕೋರ್ಟ್ ಆದೇಶವನ್ನೂ ಲೆಕ್ಕಿಸದೆ ಅನೇಕ ಕಡೆಗಳಲ್ಲಿ ಸಾರಿಗೆ ನೌಕರರು ಮುಷ್ಕರ ಮಾಡಿರವುದಿಂದ ಹೈಕೋರ್ಟ್ ಸಾರಿಗೆ ನೌಕರರ ಪರ ವಕೀಲರಿಗೆ ತೀವ್ರ ತರಾಟೆಗೆ ತೆಗೆದುಕೊಂಡಿದೆ.

Advertisement

ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್‌ನ ಸಿಜೆ ವಿಭು ಬಕ್ರು, ನ್ಯಾ.ಸಿ.ಎಂ ಜೋಷಿ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ನಡೆಯಿತು. ಸರ್ಕಾರಿ ಪರ ವಕೀಲರಾಗಿ ಎಜಿ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು.  ನಿನ್ನೆ ಸಾರಿಗೆ ಇಲಾಖೆಯ ಅಧಿಕಾರಿಗಳು, ಸಂಘಟನೆಯೊಂದಿಗೆ ಸಭೆ ಮಾಡಲಾಗಿದೆ. ನಿನ್ನೆ ರಾತ್ರಿಯಷ್ಟೇ ನೋಟಿಸ್ ಸಿಕ್ಕಿದೆ.

ರಾಜಿ ಸಂಧಾನಕ್ಕೆ ಪ್ರಯತ್ನಗಳನ್ನೂ ಮಾಡಲಾಗುತ್ತಿದೆ ಎಂದು ತಿಳಿಸಿದ್ರು, ಇದಕ್ಕೆ ಮಾತುಕತೆ ಏನಾಗಿದೆ? ಎಂದು ಹೈಕೋರ್ಟ್ ಪ್ರಶ್ನಿಸಿತು. ಅದಕ್ಕೆ ಎಜಿ, ಈವೆರೆಗೆ ಸರ್ಕಾರ ನಡೆಸಿದ ಮಾತುಕತೆಗಳ ವಿವರ ನೀಡಿದರು. ಮುಂದುವರಿದು… ಇಂಡಸ್ಟ್ರಿಯಲ್ ಡಿಸ್ಪ್ಯೂಟ್ ಕಾಯ್ದೆಯಂತೆ ಸಂಧಾನ ಸಭೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ರು.

ಬಳಿಕ ಸಾರಿಗೆ ಸಂಘಟನೆಗಳ ಪರ ವಕೀಲರನ್ನ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿತು. ಸಿಜೆ ವಿಭು ಬಕ್ರು, ನ್ಯಾ.ಸಿ.ಎಂ.ಜೋಷಿ ನೇತೃತ್ವದ ಪೀಠ ನ್ಯಾಯಾಂಗ ನಿಂದನೆಯ ಎಚ್ಚರಿಕೆಯನ್ನೂ ನೀಡಿತು. ಮುಷ್ಕರ ನಿರ್ಧಾರ ಕಾನೂನು ಬಾಹಿರವಾಗಿದೆ. ಹೈಕೋರ್ಟ್ ಆದೇಶವಿದ್ದರೂ ನೀವು ಅದನ್ನು ಪಾಲಿಸಿಲ್ಲ.

ಎಸ್ಮಾ ಕಾಯ್ದೆಯಡಿ ಸಂಘಟನೆಯ ಪದಾಧಿಕಾರಿಗಳನ್ನು ಬಂಧಿಸಬಹುದು. ನಾಳೆ ಮುಷ್ಕರ ನಿಂತಿದೆ ಎಂಬುದನ್ನ ಕೋರ್ಟ್‌ಗೆ ಹೇಳಬೇಕು ಎಂದು ತಾಕೀತು ಮಾಡಿದರು. ಇದಕ್ಕೆ ಉತ್ತರಿಸಿದ ನೌಕರರ ಸಂಘಟನೆ ಪರ ವಕೀಲರು, ನಾಳೆ ಮುಷ್ಕರ ನಡೆಸುವುದಿಲ್ಲ ಎಂದು ಹೇಳಿದರು. ಬಳಿಕ ಕೋರ್ಟ್‌ ವಿಚಾರಣೆಯನ್ನ ಆಗಸ್ಟ್‌ 7ಕ್ಕೆ ಮುಂದೂಡಿಕೆ ಮಾಡಿದೆ.

 


Spread the love

LEAVE A REPLY

Please enter your comment!
Please enter your name here