ಚಿಕ್ಕಮಗಳೂರು:- ಧಾರಕಾರ ಮಳೆಗೆ ಜಿಲ್ಲೆಯಲ್ಲಿ ಸಾಲು ಸಾಲು ಅವಾಂತರಗಳು ಸಂಭವಿಸುತ್ತಿದೆ.
ಅದರಂತೆ ಗಾಳಿ ಸಹಿತ ಧಾರಾಕಾರ ಮಳೆಯಿಂದಾಗಿ ಇಲ್ಲಿನ ಚಂದ್ರದ್ರೋಣ ಪರ್ವತ ರಸ್ತೆಯ ಮೂರು ಕಡೆಗಳಲ್ಲಿ ಬೃಹತ್ ಗಾತ್ರದ ಮರಗಳು ಧರೆಗುರುಳಿವೆ.
ಹೀಗಾಗಿ ಮುಳ್ಳಯ್ಯನಗಿರಿ, ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಮತ್ತು ಝರಿ ಫಾಲ್ಸ್ ಸಂಪರ್ಕಿಸುವ ರಸ್ತೆ ಸಂಪೂರ್ಣ ಬಂದ್ ಆಗಿದೆ. ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಿಂದಾಗಿ ಚಂದ್ರಿಕಾ ಎಸ್ಟೇಟ್, ತಿಪ್ಪೇನಹಳ್ಳಿ ಎಸ್ಟೇಟ್ ಮತ್ತು ಇಂದಿರಾನಗರ ಬಳಿ ಬೃಹತ್ ಗಾತ್ರದ ಮರ ಧರೆಗುರುಳಿದಿದೆ. ಸದ್ಯ ಸಂಚಾರ ಅಸ್ತವ್ಯಸ್ತವಾಗಿದ್ದು, ಮರ ಧರೆಗುರುಳಿದ್ದರಿಂದ ವಿದ್ಯುತ್ ಕಂಬಕ್ಕೂ ಹಾನಿ ಉಂಟಾಗಿದೆ.
ಚಿಕ್ಕಮಗಳೂರು-ಶೃಂಗೇರಿ ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಕೂಡ ಗಾಳಿ ಸಹಿತ ಭಾರಿ ಮಳೆಗೆ ಮರಗಳು ಮುರಿದುಬಿದ್ದಿದೆ. ಚಿಕ್ಕಮಗಳೂರು ತಾಲೂಕಿನ ಬಸರವಳ್ಳಿ ಬಳಿ ಮರಗಳು ಧರೆಗುರುಳಿದೆ. ಒಟ್ಟಾರೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಿಂದಾಗಿ ಸಾಲು ಸಾಲು ಅವಾಂತರಗಳು ಸಂಭವಿಸುತ್ತಿವೆ.