ಜಿಲ್ಲಾಧಿಕಾರಿಗಳಿಗೆ ಪುರಸಭೆ ಸದಸ್ಯರಿಂದ ಗೌರವ

0
Tribute to District Collector by Municipal Members
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಗದಗ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರನ್ನು ಬುಧವಾರ ಪಟ್ಟಣದ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸನ್ಮಾನಿಸಿದರು.

Advertisement

ಪಟ್ಟಣದ ಪುರಸಭೆಗೆ ಕಳೆದ ವಾರ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಜಿಲ್ಲಾಧಿಕಾರಿಗಳು ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಶುಭ ಕೋರಿ ಉತ್ತಮ ಆಡಳಿತ ನೀಡುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷೆ ಯಲ್ಲವ್ವ ದುರ್ಗಣ್ಣವರ, ಉಪಾಧ್ಯಕ್ಷ ಪೀರದೋಷ ಆಡೂರ, ಹಿರಿಯ ಸದಸ್ಯರಾದ ಜಯಕ್ಕ ಕಳ್ಳಿ, ರಾಜಣ್ಣ ಕುಂಬಿ, ಮಹೇಶ ಹೊಗೆಸೊಪ್ಪಿನ, ಬಸವರಾಜ ಓದುನವರ, ಮಂಜುಳಾ ನಂದೆಣ್ಣವರ, ಜಯಕ್ಕ ಅಂದಲಗಿ, ವಿಜಯ ಕರಡಿ, ರಾಮಪ್ಪ ಗಡದವರ, ಸಿಕಂದರ ಕಣಕೆ, ಹಾಗೂ ಮುಖ್ಯಾಧಿಕಾರಿ ಮಹೇಶ ಹಡಪದ ಇದ್ದರು.


Spread the love

LEAVE A REPLY

Please enter your comment!
Please enter your name here