ವಿಜಯಸಾಕ್ಷಿ ಸುದ್ದಿ, ಗದಗ: ವಿಜಯ ಕಲಾ ಮಂದಿರ ಚಿತ್ರಕಲಾ ಮಹಾವಿದ್ಯಾಲಯದ ಬಿವಿಎ ಅಂತಿಮ ವರ್ಷದ ವಿದ್ಯಾರ್ಥಿ ವಿನೂತ ಎಸ್.ಪತ್ತಾರ ಇವರು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ ಹಾಗೂ ಯುವ ಸಬಲೀಕರಣ ಇಲಾಖೆ ಸಹಯೋಗದಲ್ಲಿ ಜರುಗಿದ ಯುವಜನೋತ್ಸವ-2025 ಚಿತ್ರಕಲಾ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ದೆಹಲಿಯಲ್ಲಿ ಜರುಗಿದ ರಾಷ್ಟ್ರ ಮಟ್ಟದ ಸ್ಪರ್ದೆಯಲ್ಲಿಯೂ ಭಾಗವಹಿಸಿ ಕಾಲೇಜಿಗೆ ಕೀರ್ತಿ ತಂದಿದ್ದಕ್ಕಾಗಿ ವಿಜಯ ಕಲಾಮಂದಿರ ಚಿತ್ರಕಲಾ ಮಹಾವಿದ್ಯಾಯದ ಪ್ರಾಚಾರ್ಯರು, ಸಿಬ್ಬಂದಿವರ್ಗ, ವಿದ್ಯಾರ್ಥಿಗಳ ಹಾಗೂ ಆಡಳಿತ ಮಂಡಳಿ ಸದಸ್ಯರು ಸನ್ಮಾನಿಸಿ ಅಭಿನಂದಿಸಿದರು.
Advertisement
ಈ ಸಂದರ್ಭದಲ್ಲಿ ವಿಜಯ ಕಲಾಮಂದಿರ ಸಂಸ್ಥೆಯ ಕಾರ್ಯದರ್ಶಿ ಪ್ರಕಾಶ ಟಿ.ಅಕ್ಕಿ, ಪ್ರಾಚಾರ್ಯ ಕೃಷ್ಣಾ ಕೆ.ಎಮ್. ಉಪನ್ಯಾಸಕರಾದ ಶರಣಪ್ಪ ಬಿ.ಹೆಚ್, ಗಣೀಶ ಬಡಿಗೇರ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.