ಆರ್.ಎಸ್. ಹೆಬಸೂರರಿಗೆ ಶ್ರದ್ಧಾಂಜಲಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಸ್ಥಳೀಯ ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆಯ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಇತಿಹಾಸ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಆರ್.ಎಸ್. ಹೆಬಸೂರವರ ನಿಧನದ ನಿಮಿತ್ತ ಮಹಾವಿದ್ಯಾಲಯದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

Advertisement

ಸಂಸ್ಥೆಯ ಅಧ್ಯಕ್ಷರಾದ ಆರ್.ಎಮ್. ಮೂಲಿಮನಿ, ಗೌರವ ಕಾರ್ಯದರ್ಶಿ ಮುಕುಂದ ಪೋತ್ನಿಸ್, ಆಡಳಿತಾಧಿಕಾರಿ ಆರ್.ಎಸ್. ಪಾಟೀಲ, ಪ್ರಾಚಾರ್ಯ ಬಿ.ಬಿ. ಪಾಟೀಲ ಮಾತನಾಡಿ, ಆರ್.ಎಸ್. ಹೆಬಸೂರರು ಕಳೆದ 34 ವರ್ಷಗಳಿಂದ ಇತಿಹಾಸ ಉಪನ್ಯಾಸಕರಾಗಿ, ಸಂಘಟನಾ ಚತುರರಾಗಿ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಉಪನ್ಯಾಸಕರಾಗಿ, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ, ಉತ್ತಮ ಮಾರ್ಗದರ್ಶನ ನೀಡಿದ್ದರು. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಶ್ರದ್ಧಾಂಜಲಿ ಅರ್ಪಿಸಿದರು.

ಈ ಸಂದರ್ಭದಲ್ಲಿ ಪದವಿ ಹಾಗೂ ಪದವಿಪೂರ್ವ ಮಹಾವಿದ್ಯಾಲಯದ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here