ವಿಜಯಸಾಕ್ಷಿ ಸುದ್ದಿ, ಗದಗ: ಬೆಟಗೇರಿ ಶೈಕ್ಷಣಿಕ ವಲಯದಲ್ಲಿ ತನ್ನದೇ ಆದ ಸಾಧನೆಯನ್ನು ಮಾಡುತ್ತಾ ಬಂದಿರುವ ಸ್ಟುಡೆಂಟ್ ಎಜ್ಯುಕೇಶನ್ ಸಂಸ್ಥೆಯ ಸನ್ಮಾರ್ಗ ವಿಜ್ಞಾನ ಹಾಗೂ ವಾಣಿಜ್ಯ ವಿದ್ಯಾಲಯದ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ನೇಹಾ ವಿ.ಸೊರಟೂರ ಶೇ. 96.5 ಅಂಕಗಳನ್ನು ಗಳಿಸಿ ಕಾಲೇಜಿಗೆ ದ್ವಿತೀಯ ಸ್ಥಾನವನ್ನು ಪಡೆದಿದ್ದಾಳೆ.
ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರು ಹಾಗೂ ಸಿಬ್ಬಂದಿಗಳು ನೇಹಾಳ ಸ್ವಗೃಹದಲ್ಲಿ ಅಭಿನಂದನೆಗಳನ್ನು ತಿಳಿಸಿ, ಸನ್ಮಾನಿಸಿದರು. ಸಂಸ್ಥೆಯ ಚೇರ್‌ಮನ್ ಪ್ರೊ. ರಾಜೇಶ ಕುಲಕರ್ಣಿ, ಆಡಳಿತ ಮಂಡಳಿಯ ಸದಸ್ಯರಾದ ಪ್ರೊ. ರೋಹಿತ್ ಒಡೆಯರ್, ರಾಹುಲ್ ಒಡೆಯರ್, ಪ್ರೊ. ಪುನೀತ್ ದೇಶಪಾಂಡೆ, ಪ್ರೊ. ಸೈಯದ್ ಮತೀನ್ ಮುಲ್ಲಾ, ಪ್ರಾಚಾರ್ಯ ಪ್ರೊ. ಪ್ರೇಮಾನಂದ ರೋಣದ, ಆಡಳಿತಾಧಿಕಾರಿ ಎಂ.ಸಿ. ಹಿರೇಮಠ, ಪ್ರೊ. ಶಿವಕುಮಾರ ವಜ್ರಬಂಡಿ, ಪ್ರೊ. ಡಿ.ಬಿ. ಕುಲಕರ್ಣಿ, ಪ್ರೊ. ಪರಶುರಾಮ ಕೋಟ್ನಿಕಲ್, ಪ್ರೊ. ಸಂಗೀತಾ ಬೀಳಗಿ ಉಪಸ್ಥಿತರಿದ್ದು ವಿದ್ಯಾರ್ಥಿಯ ಭವಿಷ್ಯಉಜ್ವಲವಾಗಲಿ ಎಂದು ಆಶಿಸಿದರು.