HomeIndia Newsತ್ರಿಷಾ ಹೇಳಿಕೆ ವಿವಾದ; ಉದಯನಿಧಿ ಸ್ಟಾಲಿನ್ʼಗೆ ಮದ್ರಾಸ್ ಹೈಕೋರ್ಟ್ʼನಿಂದ ಸ್ಟೇಷನ್ ಬೇಲ್ ಆದೇಶ

ತ್ರಿಷಾ ಹೇಳಿಕೆ ವಿವಾದ; ಉದಯನಿಧಿ ಸ್ಟಾಲಿನ್ʼಗೆ ಮದ್ರಾಸ್ ಹೈಕೋರ್ಟ್ʼನಿಂದ ಸ್ಟೇಷನ್ ಬೇಲ್ ಆದೇಶ

For Dai;y Updates Join Our whatsapp Group

ಚೆನ್ನೈ: ತಮಿಳುನಾಡು ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರಿಗೆ ಮದ್ರಾಸ್ ಹೈಕೋರ್ಟ್‌ ಪರಿಹಾರ ನೀಡಿದ್ದು, ಮಂಗಳವಾರವೇ ಅವರನ್ನು ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡುವಂತೆ ತಮಿಳುನಾಡು ಪೊಲೀಸರಿಗೆ ನಿರ್ದೇಶನ ನೀಡಿದೆ.

ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ವಿಜಯ್ ವಿರುದ್ಧ ವಾಗ್ದಾಳಿ ನಡೆಸುವ ವೇಳೆ ಉದಯನಿಧಿ ಸ್ಟಾಲಿನ್ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಈ ಹೇಳಿಕೆಯನ್ನು ನಟಿ ತ್ರಿಷಾ ಕೃಷ್ಣನ್ ಅವರನ್ನು ಉದ್ದೇಶಿಸಿ ಮಾಡಿದ ಪರೋಕ್ಷ ದ್ವಂದ್ವಾರ್ಥದ ಹೇಳಿಕೆ ಎಂದು ಹಲವು ರಾಜಕೀಯ ಪಕ್ಷಗಳು ಆರೋಪಿಸಿದ್ದವು.

ಈ ಹಿನ್ನೆಲೆಯಲ್ಲಿ ತಮಿಳುನಾಡಿನಾದ್ಯಂತ ಉದಯನಿಧಿ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಾಗ ವೆಟ್ರಿ ಕಳಗಂ (TVK) ಸೇರಿದಂತೆ ಹಲವು ಸಂಘಟನೆಗಳು ದೂರು ದಾಖಲಿಸಿದ್ದವು.

ಮದ್ರಾಸ್ ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆ ವೇಳೆ ತಮಿಳುನಾಡು ಅಡ್ವೊಕೇಟ್ ಜನರಲ್ ವಿಜಯ್ ನಾರಾಯಣ್ ಅವರು, ತಂಜಾವೂರು ಪೊಲೀಸರು ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಿ ತಂಜಾವೂರಿಗೆ ಕರೆದೊಯ್ದಿದ್ದಾರೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.

ಆದರೆ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸುವ ಉದ್ದೇಶ ಪೊಲೀಸರಿಗೆ ಇಲ್ಲ. ವಿಚಾರಣೆ ಪೂರ್ಣಗೊಳಿಸಿದ ಬಳಿಕ ಮಂಗಳವಾರವೇ ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರವೂ ನ್ಯಾಯಾಲಯಕ್ಕೆ ಇದೇ ವಿಚಾರವನ್ನು ಸ್ಪಷ್ಟಪಡಿಸಿದ್ದು, ಕೇವಲ ವಿಚಾರಣೆ ನಡೆಸಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿತ್ತು.

ಏನಿದು ವಿವಾದ?

ತಂಜಾವೂರಿನಲ್ಲಿ ಕಾವೇರಿ ನೀರಿನ ಬಿಕ್ಕಟ್ಟಿನ ಕುರಿತು ಡಿಎಂಕೆ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಉದಯನಿಧಿ ಸ್ಟಾಲಿನ್ ಮಾತನಾಡುತ್ತಿದ್ದರು.

ಈ ವೇಳೆ ಅವರು ಮುಖ್ಯಮಂತ್ರಿ ವಿಜಯ್ ವಿರುದ್ಧ ವಾಗ್ದಾಳಿ ನಡೆಸುತ್ತಾ, ಕಾವೇರಿ ನೀರಿನ ವಿಚಾರದಲ್ಲಿ ಸರ್ಕಾರ ಮೌನವಾಗಿದೆ ಎಂದು ಆರೋಪಿಸಿದ್ದರು. ಇದೇ ಸಂದರ್ಭದಲ್ಲಿ ಸಭೆಯಲ್ಲಿದ್ದ ಕೆಲವರು ನಟಿ ತ್ರಿಷಾ ಅವರ ಹೆಸರನ್ನು ಕೂಗಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಉದಯನಿಧಿ, ನಗುಮುಖದೊಂದಿಗೆ “ಯಾವ ನೀರು ಬರುತ್ತದೋ ಇಲ್ಲವೋ, ಆ ನೀರು ಬರಲೇಬೇಕು” ಎಂಬ ಅರ್ಥ ಬರುವ ರೀತಿಯಲ್ಲಿ ಹೇಳಿಕೆ ನೀಡಿದ್ದರು.

ಈ ಹೇಳಿಕೆಯು ದ್ವಂದ್ವಾರ್ಥ ಹೊಂದಿದ್ದು, ನಟಿ ತ್ರಿಷಾ ಅವರನ್ನು ಗುರಿಯಾಗಿಸಿ ಮಹಿಳೆಯನ್ನು ಅವಮಾನಿಸುವ ರೀತಿಯಲ್ಲಿದೆ ಎಂದು ಟಿವಿಕೆ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಆರೋಪಿಸಿದ್ದವು.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದು, ಹೇಳಿಕೆ ಕುರಿತು ರಾಜಕೀಯ ವಲಯದಲ್ಲಿ ಚರ್ಚೆ ಮುಂದುವರಿದಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img