ಬೆಂಗಳೂರು:- ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬಿಗ್ ಶಾಕ್ ಕೊಟ್ಟಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಸಿಎಂ ಸಿದ್ದರಾಮಯ್ಯಗೆ ಶಾಕ್ ನೀಡಿದ್ದ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇದೀಗ ಅವರ ಆಪ್ತ ಸಚಿವ ಜಮೀರ್ ಅಹ್ಮದ್ ಗೂ ಆಘಾತ ನೀಡಿದ್ದಾರೆ.
ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ನೀಡಿದ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿ ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಜಮೀರ್ ಅಹ್ಮದ್ ಖಾನ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯಾಪಾಲರ ಥಾವರ್ ಚೆಂದ್ ಗೆಹ್ಲೋಟ್ ಅವರು ಸರ್ಕಾರದ ಅಡ್ವೋಕೇಟ್ ಜನರಲ್ ಗೆ ಸೂಚನೆ ನೀಡಿದ್ದಾರೆ.
ಟಿಜೆ ಅಬ್ರಾಹಮ್ ದೂರಿನ ಮೇರೆಗೆ ಸಚಿವ ಜಮೀರ್ ಅಹಮ್ಮದ್ ಹೇಳಿಕೆ ಸಂಬಂಧ ಅಡ್ವೋಕೇಟ್ ಜನರಲ್‌ಗೆ ರಾಜ್ಯಪಾಲರು ಪತ್ರ ಬರೆದಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಘಟನೆ ಹಿನ್ನೆಲೆ:-
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಟಿಜೆ ಅಬ್ರಾಹಮ್ ರಾಜ್ಯಪಾಲರಿಗೆ ದೂರು ನೀಡಿದ್ದರು. ಬಳಿಕ ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ತನಿಗೆ ಅನುಮತಿ ನೀಡಿದ್ದರು.
ಇದನ್ನು ಪ್ರಶ್ನಿಸಿ ಸಿಎಂ, ಕೋರ್ಟ್ ಮೆಟ್ಟಿಲೇರಿದ್ದರು. ಆದ್ರೆ, ಹೈಕೋರ್ಟ್ ಸಿಎಂ ವಿರುದ್ಧದ ತನಿಖೆಗೆ ಆದೇಶಿಸಿತ್ತು. ಈ ತೀರ್ಪನ್ನು ಜಮೀರ್ ಅಹಮ್ಮದ್ ಖಾನ್, ರಾಜಕೀಯ ಪ್ರೇರಿತವಾಗಿದ್ದು, ಅದೊಂದು ರಾಜಕೀಯ ತೀರ್ಪು ಎಂದು ಹೇಳಿದ್ದರು. ಆ ಹಿನ್ನೆಲೆಯಲ್ಲಿ ಮುಡಾ ದೂರುದಾರರಲ್ಲೊಬ್ಬರಾದ ಟಿ.ಜೆ. ಅಬ್ರಹಾಂ ಅವರು ಜಮೀರ್ ಅವರ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಿ ಪಾಠ ಕಲಿಸುವುದಾಗಿ ಹೇಳಿದ್ದರು.