ಚಿತ್ರದುರ್ಗ: ಬೈಕ್ಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಯತ್ನಿಸಿದ ವೇಳೆ ಬೈಕ್ನಿಂದ ಬಿದ್ದು ಸಹಾಯಕ ಉಪನಿರೀಕ್ಷಕ (ಎಎಸ್ಐ) ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಕ್ರಾಸ್ ಬಳಿ ನಡೆದಿದೆ.
ಮೃತರನ್ನು ಪರಶರಾಂಪುರ ಪೊಲೀಸ್ ಠಾಣೆಯ ಎಎಸ್ಐ ಮಂಜುನಾಥ್ (50) ಎಂದು ಗುರುತಿಸಲಾಗಿದೆ. ಐಮಂಗಲ ಪೊಲೀಸ್ ತರಬೇತಿ ಶಾಲೆಯಿಂದ ವಾಪಸ್ಸಾಗುವ ವೇಳೆ ಈ ದುರ್ಘಟನೆ ಸಂಭವಿಸಿದೆ.
ಬೈಕ್ನಲ್ಲಿ ಮಂಜುನಾಥ್ ಅವರೊಂದಿಗೆ ಪ್ರಯಾಣಿಸುತ್ತಿದ್ದ ಪೊಲೀಸ್ ಪೇದೆ ಸೂರ್ಯಪ್ರಭಾಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುವನ್ನು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



