ತುಮಕೂರು: ಹಿಂಬದಿಯಿಂದ ಅತಿ ವೇಗವಾಗಿ ಬಂದ ಕಾರೊಂದು ಟ್ರಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಟ್ರಾಕ್ಟರ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ಮೃತನನ್ನು ಕೆಂಪೇಗೌಡ ಎಂದು ಗುರುತಿಸಲಾಗಿದೆ. ಈ ಅಪಘಾತವು ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಹೇರೂರು ಬ್ರಿಡ್ಜ್ ಮೇಲೆ ಸಂಭವಿಸಿದೆ. ಕಾರಿನ ಡಿಕ್ಕಿಯ ರಭಸಕ್ಕೆ ಟ್ರಾಕ್ಟರ್ ಪಲ್ಟಿಯಾಗಿದ್ದು, ಚಾಲಕ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ಬಳಿಕ ಮೃತದೇಹವನ್ನು ಕುಣಿಗಲ್‌ನ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಪ್ರಕರಣ ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.



